ಬಾಗಲಕೋಟೆ27: ರಾಜ್ಯದಲ್ಲಿ 100 ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 500 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ನವನಗರದ ಸೆಕ್ಟರ್ ನಂ 44 ರಲ್ಲಿ ನಿರ್ಮಿಸಲಾದ ಮೊರಾಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜ ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಸಚಿವರ ಜೊತೆ ಚರ್ಚೆ ಮಾಡಲಾಗಿದ್ದು, ವಾರದಲ್ಲಿಯೇ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.
ರಾಜ್ಯದಲ್ಲಿ ಒಟ್ಟು 824 ವಸತಿ ನಿಲಯಗಳಲ್ಲಿ ಒಟ್ಟು 3693 ವಿದ್ಯಾಥರ್ಿಗಳು ಕಲಿಯುತ್ತಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಒಟ್ಟು 48 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ಅಲ್ಲದೇ ಓದಿನಲ್ಲಿ ಉತ್ತಮ ಸಾಧನೆ ಮತ್ತು ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಪ್ರೋತ್ಸಾಹಧನ ಸಹ ನೀಡಲಾಗುತ್ತಿದೆ. ರಾಜ್ಯದಲ್ಲಿ ಇಡೀ ದೇಶದಲ್ಲಿ ಬಡವರ, ದಲಿತ ಮಕ್ಕಳಿಗಾಗಿ ಶಿಕ್ಷಣ ವ್ಯವಸ್ಥೆ ನೀಡಿದ ದೇಶದ ಯಾವ ಜಿಲ್ಲೆಯಲ್ಲಿಯೂ ಇಲ್ಲವೆಂದರು.
ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಸಿಪಿ, ಎಸ್ಟಿಪಿ ಉಪ ಯೋಜನೆಯಡಿ ಎಲ್ಲ ವಿವಿಧ ಅಭಿವೃದ್ದಿ ಇಲಾಖೆಗಳಿಗೆ ಒಟ್ಟು 30,445 ಕೋಟಿ ಅನುದಾನ ಒದಗಿಸಲಾಗಿದ್ದು, ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ ಬಯಸಿದಂತೆ ದಲಿತರು ವಿದ್ಯಾವಂತರನ್ನಾಗಿ ಮಾಡಿ ಆರ್ಥಿಕ ವಾಗಿ, ಸಬಲಿಕರಣಗೊಳಿಸಿ ಸಮಾಜದಲ್ಲಿ ಇತರರಿಗೆ ಸಿಗುವ ಗೌರವ ಸಿಗುವಂತೆ ಮಾಡಲಾಗುತ್ತಿದೆ. ರಾಜ್ಯದ 824 ವಸತಿ ಶಾಲೆಗಳ ಪೈಕಿ 450 ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ಇವೆ. 8 ವಸತಿ ನಿಲಯ ನಿರ್ಮಾಣಕ್ಕೆ ಟೆಂಡರ ಪ್ರಕ್ರಿಯೆ ನಡೆದಿದೆ ಎಂದರು.
ಜಿಲ್ಲೆಯಲ್ಲಿ 5 ನೂತನ ವಸತಿ ಶಾಲೆಗಳ ಕಟ್ಟಡ ನಿರ್ಮಿ ಸಲಾಗುತ್ತಿದೆ. ಬೀಳಗಿ ತಾಲೂಕಿನ ಅನಗವಾಡಿ, ಹುನಗುಂದ ತಾಲೂಕಿನ ಸುಳೆಭಾವಿ, ಕಂದಗಲ್ಲ, ಮುಧೋಳ ತಾಲೂಕಿನ ಕುಳಲಿ, ಜಮಖಂಡಿ ತಾಲೂಕಿನ ಕೊಣ್ಣೂರಿಯಲ್ಲಿ ನಿರ್ಮಿಸಲಾಗುತ್ತಿದೆ. ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ಒಟ್ಟು 28000 ಬೋರವೆಲ್ಗಳನ್ನು ಕೊರೆಯಿಸಲಾಗುತ್ತಿದೆ. ಈ ವರ್ಷ ವಸತಿ ಶಾಲೆ ನಿಗಮದಿಂದ 100 ಪದವಿ ಪೂರ್ವ ವಸತಿ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ 21 ಮುರಾಜರ್ಿ ದೇಸಾಯಿ
ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ದಿಗೆ 10.25 ಕೋಟಿ ಅನುದಾನ ಮಂಜೂರಾಗಿದ್ದು, 42 ಕಾಮಗಾರಿಗಳು ಅನುಷ್ಠಾನಗೊಂಡಿವೆ. ಪರಿಶಿಷ್ಟ ಪಂಗಡ ಕಾಲೋನಿ ಅಭಿವೃದ್ದಿಗೆ 4.75 ಕೋಟಿ ರೂ.ಗಳ ಅನುದಾನ ನೀಡಿದ್ದು, 18 ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. ಸಮಾಜ ಕಲ್ಯಾಣ ಇಲಾಖೆ ವಿವಿಧ ಭವನಗಳ ನಿಮರ್ಾಣಕ್ಕೆ 4 ಕೋಟಿ ರೂ.ಗಳ ಅನುದಾನ ನೀಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗಕ್ಕೆ ರೂಪಿಸಿದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ವಸತಿ ಶಾಲೆಗಳನ್ನು ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸುವ ಕೆಲಸವಾಗಬೇಕು. ನೂತನ ಕಟ್ಟಡದ ನಿರ್ವಹಣೆಯಾಗುವಂತೆ ಮಾಡಬೇಕು. ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ಸರಕಾರ ಬಹಳಷ್ಟು ಖಚರ್ು ಮಾಡಿ ವಸತಿ ಶಾಲೆ, ನಿಲಯಗಳನ್ನು ಕಟ್ಟಲಾಗುತ್ತಿದೆ. ಇಂತಹ ಶಾಲೆ, ನಿಲಯಗಳಲ್ಲಿ ಎಲ್ಲ ವರ್ಗದ ಇದರ ಪ್ರಯೋಜನ ಪಡೆದು ಸಮಾನತೆಯಿಂದ ಬದುಕುವಂತಾಗಬೇಕು. ಇಲಾಖೆಯ ಕಾರ್ಯವೈಖರಿಗಳಯ ಬದಲಾವಣೆಗೊಳ್ಳಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವಸತಿ ನಿಲಯಗಳಲ್ಲಿ ಗುಣಮಟ್ಟದ ಊಟ ನೀಡಬೇಕು. ಕಟ್ಟಡ ನಿರ್ವಹಣೆಯಾಗುವಂತೆ ಮಾಡಬೇಕು. ಕಟ್ಟಡದ ಮೇಲ್ಬಾಗದಲ್ಲಿ ಛಾವಣಿ ನಿರ್ಮಿಸಬೇಕು. ಅದರ ಮೇಲೆ ಬಿದ್ದ ನೀರನ್ನು ಸಂಗ್ರಹಿಸುವ ಕಾರ್ಯವಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಅದ್ಯಕ್ಷೆ ಬಾಯಕ್ಕ ಮೇಟಿ, ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ನಗರಸಭೆ ಸದಸ್ಯೆ ನಾಗರತ್ನಾ ಹೆಬ್ಬಳ್ಳಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಜಿ.ಪಂ ಉಪ ಕಾರ್ಯದಶರ್ಿ ಎ.ಜಿ.ತೋಟದ, ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕ ಜಗದೀಶ ಹೆಬ್ಬಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.