ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ಸಂಚಾರ: ಸಂಭ್ರಮಾಚರಣೆ
500 crore women passengers travel under Shakti Yojana: Celebration
ಮುದ್ದೇಬಿಹಾಳ 15: ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ ಹಿನ್ನೆಲೆಯಲ್ಲಿ ತಾಲೂಕಾ ಗ್ಯಾರಂಟಿ ಯೋಜನೆ ಸಮೀತಿ ಹಾಗೂ ತಾಲೂಕಾ ಬ್ಲಾಕ್ ಕಾಂಗ್ರೆಸ್ ಘಟಕ ಹಾಗೂ ಮುದ್ದೇಬಿಹಾಳ ಸಾರಿಗೆ ಘಟಕದಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು.
ತಾಲೂಕಾ ಪಂಚ ಗ್ಯಾರಂಟಿ ಸಮಿತಿಯ ತಾಲೂಕಾಧ್ಯಕ್ಷ ಶಿವಶಂಕರಗೌಡ ಹಿರೇಗೌಡರ ಅವರು ಮಾತನಾಡಿ 2023ರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಸಧ್ಯ ರಾಜ್ಯದ ಮುಖ್ಯಮಂತ್ರಿ ಸಿದ್ರಾಮಯ್ಯನವರು ಅಧಿಕಾರಕ್ಕೆ ಬಂದ ಕೂಡಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯರಿಗೆ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಲು ಅನುಕೂಲವಾಗಿದೆ ಎಂದು ತಿಳಿಸಿದರು.
ಸ್ಥಳಿಯ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ)ಯವರ ಮಾರ್ಗದರ್ಶನದಲ್ಲಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೇಲೆಯಲ್ಲಿ ಕಾಂಗ್ರೇಸ್ ಘಟಕಗಳ ಕಾರ್ಯಕರ್ತರ ನೇತೃತ್ವದಲ್ಲಿ ಸಂಭ್ರಮಾಚರಣೆ ಆಚರಿಸಲಾಗುತ್ತಿದೆ. ಶಕ್ತಿ ಯೋಜನೆ ಉಚಿತ ಬಸ್ ಪ್ರಯಾಣ ಯೋಜನೆಯು ಸಾಮಾಜಿಕ ಸಮಾನತೆಗಾಗಿ ಯಾವುದೇ ತಾರತಮ್ಯವಿಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರಿಯಾಗಿದೆ. ಸಮಾಜ ಏಳಿಗೆ ಕಾಣಬೇಕಾದರೆ ಪುರುಷ ಹಾಗೂ ಮಹಿಳೆಯರ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಉದ್ಯೋಗಸ್ಥ ಮಹಿಳೆಯರ ಸಂಖ್ಯೆ ಕಡಿಮೆಯಾಗಿದ್ದು, ಶಕ್ತಿ ಯೋಜನೆಯು ಉದ್ಯೋಗಸ್ಥ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ.
ಗಾಮೆಂರ್ಟ್ಸ್ ಕೆಲಸಗಾರರು, ಮನೆ ಕೆಲಸಗಾರರು, ದಿನಗೂಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ರೈತರು, ವ್ಯಾಪಾರಸ್ಥರು ತಿಂಗಳಿಗೆ 15 ರಿಂದ 20 ಸಾವಿರದವರೆಗೆ ಸಂಬಳ ಪಡೆದು ಕಷ್ಟದಲ್ಲಿರುವ ಜೀವನ ಸಾಗಿಸುತ್ತಿದ್ದಾರೆ. 'ಶಕ್ತಿ' ಯೋಜನೆಯಡಿ ಉಚಿತ ಬಸ್ ಸಂಚಾರದಿಂದ ತಿಂಗಳಿಗೆ 1,500 ರೂ. ರಿಂದ 2 ಸಾವಿರ ರೂ. ತನಕ ಉಳಿತಾಯ ತಂದಿರುವುದು ಬಡ ಹಾಗೂ ಮಾಧ್ಯಮ ಕುಟುಂಬದ ವರ್ಗದವರಿಗೆ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.
ತಾಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಹಲವು ಮಹಿಳಾ ರೈತರು ಸ್ಥಳೀಯವಾಗಿ ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಮನೆ ಮನೆಗೆ ತೆರಳಿ 'ಶಕ್ತಿ' ಯೋಜನೆಯಿಂದ ಪ್ರತಿದಿನ ಸುಮಾರು 200 ರೂಪಾಯಿ ಉಳಿಸುತ್ತಿದ್ದಾರೆ.ಜತೆಗೆ ಬಡ ಕುಟುಂಭದ ವಿದ್ಯಾರ್ಥಿನಿಯರು ದಿನನಿತ್ಯ ಬಸ್ಸಿಗೆ ಹಣ ನೀಡಿ ಪ್ರಯಾಣ ಮಾಡಲು ಅಸಾಧ್ಯವಾಗುತ್ತಿತ್ತು. ಉಚಿತ ಬಸ್ ಪ್ರಯಾಣ ಯೋಜನೆಯಿಂದ ನೆಮ್ಮದಿಯಾಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿರುವುದು ವಿದ್ಯಾಭ್ಯಾಸ ಮುಂದುವರಿಸಲು ತುಂಬಾ ಅನುಕೂಲಕರವಾಗಿದೆ. 'ಶಕ್ತಿ' ಯೋಜನೆ ಜಾರಿಗೆ ಬಂದ ಬಳಿಕ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಕುಟುಂಬಸ್ಥರನ್ನು ಪರಸ್ಪರ ಭೇಟಿ ಮಾಡಿ ಮಾತನಾಡುತ್ತಾರೆ. ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಇದರಿಂದ ಪ್ರಾಪಂಚಿಕ ಜ್ಞಾನ ಹೆಚ್ಚುತ್ತದೆ. ಯೋಜನೆಯು ಮಹಿಳೆಯರ ಏಳಿಗೆ ಸಾಧಿಸುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸಿರುವುದು ಶ್ಲಾಘನೀಯವಾಗಿದೆ ಎಂದರು.
ಗ್ಯಾರಂಟಿ ಯೋಜನೆ ಸದಸ್ಯೆ ಸರಸ್ವತಿ ಪಿರಾಪೂರ, ಸಾರಿಗೆ ಘಟಕದ ವ್ಯವಸ್ಥಾಪಕ ಎ ಎಚ್ ಮಧುಭಾವಿ ಅವರು ಮಾತನಾಡಿದರು. ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್ ಎಸ್ ಮಸಳಿ, ತಾಲೂಕಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ, ಗ್ಯಾರಂಟಿ ಸದಸ್ಯರಾದ ಪಿಂಟು ಸಾಲಿಮನಿ, ಸದ್ದಾಂ ಕುಂಟೋಜಿ, ರಾಜು ನಾಯಕ, ಸುಜಾತಾ ಶಿಂಧೇ, ಬಸವರಾಜ ತಾಳಿಕೋಟಿ, ಬಸವರಾಜ ಚಿನಿವಾರ, ಬಡ್ಡೇಸಾ ಚಪ್ಪರಬಂದ, ಸಂಗಮೇಶ ಚಲವಾದಿ, ಹಣಮಂತ ಕುರಿ, ಮುಖಂಡರಾದ ಲಕ್ಷ್ಮಣ ಲಮಾಣಿ, ರಾಮಣ್ಣ ರಾಜನಾಳ, ಗುರು ಬಿರಾದಾರ, ಸಂಗಪ್ಪ ಮೇಲಿನಮನಿ ಸೇರಿದಂತೆ ಹಲವರು ಇದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 