ವಿವಿಧ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 504 ಪ್ರಯಾಣಿಕರು
ಬೆಂಗಳೂರು, ಮೇ 23,ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾವಿನವರೆಗೆ ವಿವಿಧ ದೇಶಗಳಿಂದ 504 ಭಾರತೀಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಇಂಡೋನೇಷ್ಯಾದ ಜರ್ಕಾತದಿಂದ ಶನಿವಾರ ಬೆಳಗಿನ ಜಾವ 1.40ರ ವೇಳೆಗೆ ದೇವನಹಳ್ಳಿಯ ಬಿಐಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೆರಡನೆಯ ವಿಮಾನದಲ್ಲಿ 214 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಇವರನ್ನು ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಇವರೆಲ್ಲರನ್ನೂ 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಗುರುವಾರ ರಾತ್ರಿ 9.30ಕ್ಕೆ ಮಲೇಷ್ಯಾದ ಕೌಲಾಲಂಪುರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೊಂದನೇ ವಿಮಾನದಲ್ಲಿ 108 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಇವರಲ್ಲಿ ಓರ್ವ ಗರ್ಭಿಣಿ, ಇಬ್ಬರು ಮಕ್ಕಳು ಸೇರಿದಂತೆ 80 ಪುರುಷರು ಮತ್ತು 28 ಮಹಿಳೆಯರು ಇದ್ದರು. ಇವರಲ್ಲಿ ಕೂಡ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.ನಂತರ ರಾತ್ರಿ 9 ಗಂಟೆಗೆ ಬವಿಮಾನ ನಿಲ್ದಾಣಕ್ಕೆ ಬಂದಿಳಿದ ಹತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 182 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಇವರಲ್ಲಿ ಹತ್ತು ವರ್ಷದೊಳಗಿನ 16 ಮಕ್ಕಳು, 127 ಪುರುಷರು ಮತ್ತು 39 ಮಹಿಳೆಯರು ಇದ್ದಾರೆ. ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ.ಪ್ರತಿಯೊಬ್ಬರನ್ನೂ 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಪಿ.ಎನ್.ರವೀಂದ್ರ ಮಾಹಿತಿ ನೀಡಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 