ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ 509 ಪ್ರಕರಣಗಳ ಇತ್ಯರ್ಥ
ಕೊಪ್ಪಳ 25: ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಜರುಗಿದ್ದು, ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು ಸೇರಿದಂತೆ ಒಟ್ಟು 509 ಪ್ರಕರಣಗಳು ಇತ್ಯರ್ಥಗೊಂಡಿವೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದ ಮೇರೆಗೆ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುಗರ್ಾ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ವಿವಿಧ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ರಾಜೀ ಮಾಡಲಾಯಿತು. ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು-31, ಅಸಲು ದಾವೆಗಳು-140, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು-23, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು-02, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮೀನಲ್ ಪ್ರಕರಣಗಳು-35, ಚೆಕ್ ಬೌನ್ಸ್ ಪ್ರಕರಣಗಳು-26 ಹಾಗೂ ಇತರೆ/ ಕ್ರಿಮೀನಲ್ ಪ್ರಕರಣಗಳು-254 ಸೇರಿ ಒಟ್ಟು 509 ಪ್ರಕರಣಗಳು ಇತ್ಯರ್ಥಪಡಿಸಿ ರೂ. 1,77,80,660/- ಮೊತ್ತದ ಪರಿಹಾರ ಹಣಕ್ಕೆ ರಾಜೀ ಮಾಡಲಾಯಿತು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕಣರ್ಿ ಅವರು ತಿಳಿಸಿದ್ದಾರೆ.
ಲೋಕ್ ಅದಾಲತ್ಗೆ ಸಹಕರಿಸಿದ ಎಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರಿಗೆ, ವಕೀಲರ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೆ, ಸಂಧಾನಕಾರರಿಗೆ, ಕಕ್ಷಿದಾರರಿಗೆ, ಬ್ಯಾಂಕ್/ ಇನ್ಸೂರೆನ್ಸ್ ಮ್ಯಾನೇಜರ್ಸ್ಗಳಿಗೆ ಹಾಗೂ ನ್ಯಾಯಾಲಯದ ಸಿಬ್ಬಂದಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 