ಮಾಸ್ಕೋ, ಮಾ 27,ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 55 ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.ಚೀನಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81,340 ತಲುಪಿದೆ. ಇಲ್ಲಿಯವರೆಗೆ 3292 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೃಢಪಟ್ಟಿರುವ 5 ಸಾವುಗಳು ಹುಬೈ ಪ್ರಾಂತ್ಯದಲ್ಲಿ ಕಂಡುಬಂದಿದೆ. ಮಾರ್ಚ್ 11ರಂದು ಕೋವಿಡ್ -19 ಅನ್ನು ಸಾಂಕ್ರಾಮಿಕ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತ್ತು.