55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ಕೋವಿಡ್ ಕರ್ತವ್ಯಕ್ಕೆ ಬೇಡ: ಡಿಜಿಪಿ ಪ್ರವೀಣ್ ಸೂದ್ ಆದೇಶ
ಬೆಂಗಳೂರು, ಏ.29, ಮಾಹಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯ ಮತ್ತು ಇತರ ಕಾರ್ಯಾಚರಣೆಗಳಿಗೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿದೇಶಕ (ಡಿಜಿ- ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.ಮಧುಮೇಹ, ರಕ್ತ ದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಕೂಡ ಆರೋಗ್ಯ ದ ದೃಷ್ಟಿ ಯಿಂದ ರಸ್ತೆಯ ಮೇಲಿನ ತಪಾಸಣೆ, ಮತ್ತಿತರ ಕರ್ತವ್ಯ ಗಳಿಗೆ ನಿಯೋಜಿಸ ಬಾರದು ಎಂದು ಆದೇಶ ದಲ್ಲಿ ತಿಳಿಸಿದ್ದಾರೆ.
ಅಂತಹ ಸಿಬ್ಬಂದಿಯನ್ನು ಪೊಲೀಸ್ ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಕಬೇಕು ಎಂದು ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.ವಯಸ್ಸಾದವರನ್ನು ಹಾಗೂ ಕಾಯಿಲೆ ಇರುವವರನ್ನ ಕೋವಿಡ್ ಬಾಧಿಸುತ್ತದೆ. ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಕೆಲಸವಾಗಿದೆ. ಹೀಗಾಗಿ 55 ವರ್ಷ ಮೇಲ್ಪಟ್ಟವರನ್ನ ರಸ್ತೆ, ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ಹಾಕಬಾರದು. ಸ್ಟೇಷನ್ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಒದಗಿಸಬೇಕು ಎಂದು ರಾಜ್ಯದ ಎಲ್ಲಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ಸೂದ್ ತಿಳಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 