ಕಲಬುರ್ಗಿಯಲ್ಲಿ 5 ನೆಯ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನ
5th Book Publishers Cultural Conference in Kalaburagi
ಕೊಪ್ಪಳ 16: ಹೈದರಾಬಾದ್ ಕರ್ನಾಟಕ ಪುಸ್ತಕ ಪ್ರಕಾಶಕರ ಮುದ್ರಕರ ಮಾರಾಟಗಾರರ ಸಂಘದ ವತಿಯಿಂದ 5ನೇ ಬಾರಿಗೆ ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನವನ್ನು 2026ರ ಮೇ ಅಂತ್ಯದಲ್ಲಿ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ . ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಪ್ರಕಾಶಕರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಐತಿಹಾಸಿಕ ಸಾಹಿತ್ಯಸಾಂಸ್ಕೃತಿಕ ಪರಂಪರೆ ಮತ್ತು ಸ್ಥಳೀಯ ಗ್ರಾಮೀಣ ಜಾನಪದ ಸಾಹಿತ್ಯದ ಅನಾವರಣ. ಜಿಲ್ಲೆಯ ಪ್ರತಿಭಾವಂತ ಸಾಹಿತಿಗಳ ಯುವಕವಿಗಳ ಪ್ರತಿಭೆಗಳ ಪ್ರತಿಭಾ ಶೋಧ.ಹಿರಿಯ ಪುಸ್ತಕ ಪ್ರಕಾಶಕರಿಗೆ ಸನ್ಮಾನ ಪುಸ್ತಕ ಪ್ರಕಾಶಕರ ಕೃತಿಗಳಿಗೆ ಪ್ರಶಸ್ತಿ ಹಾಗೂಪ್ರಕಾಶಕರ ಕವಿ ಗೋಷ್ಠಿ ಪ್ರಕಾಶನದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪ್ರಕಾಶಕರನ್ನ ಗುರುಜಿಸಿ ಗೌರವಿಸುವಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಿದೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಪೂರ್ವಭಾವಿ ಸಭೆಯಲ್ಲಿ ಕಲ್ಯಾಣ ಕರ್ನಾಟಕದಜಿಲ್ಲೆಯ ಯುವ ಸಾಹಿತಿ ಕವಿಗಳಿಗೆ ವೇದಿಕೆ ಒದಗಿಸಿಕೊಡುವ ಬಗ್ಗೆ ಚರ್ಚಿಸಿ ಹೆಚ್ಚಿನ ಅವಕಾಶವನ್ನು ಸ್ಥಳೀಯ ಪ್ರಕಾಶಕರಿಗೆಸಾಹಿತಿಗಳಿಗೆ ನೀಡಲು ನಿರ್ಣಯಿಸಲಾಯಿತು. 5 ನೆಯ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಲಾಯಿತು ಎಂದು ಮಹಿಪಾಲರೆಡ್ಡಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 