ಕಾಗವಾಡ ಶಿವಾನಂದ ಮಹಾವಿದ್ಯಾಲಯದಲ್ಲಿ 60ನೇ ಸಂಸ್ಥಾಪನಾ ದಿನಾಚರಣೆ
60th Foundation Day Celebrations at Kagawad Shivananda College
ಲೋಕದರ್ಶನ ವರದಿ
ಕಾಗವಾಡ 21 : ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೂಕ್ತವಾದ ಶಿಕ್ಷಣವನ್ನು ನೀಡಲು ಪ್ರಾರಂಭಿಸಿದ ಶಿವಾನಂದ ಮಹಾವಿದ್ಯಾಲಯ 60ನೇ ವರ್ಷದಲ್ಲಿ ಪಾದಾರೆ್ನ ಮಾಡಿದ್ದು, ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯನ್ನು ಮಾಡಿದೆ ಎಂದು ಮಹಾವಿದ್ಯಾಲಯದ ಕಾರ್ಯದರ್ಶಿ ಪ್ರೊ. ಬಿ.ಎ. ಪಾಟೀಲ ಹೇಳಿದ್ದಾರೆ.
ಅವರು, ಶನಿವಾರ ದಿ. 20 ರಂದು ಶಿವಾನಂದ ಮಹಾವಿದ್ಯಾಯಲದ ಸಂಸ್ಥಾಪನಾ ದಿನದ ನಿಮಿತ್ಯ ನಡೆದ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಜ್ಞಾನ ಪ್ರಸಾರಕ್ಕಾಗಿ ಉನ್ನತ ಶಿಕ್ಷಣ ನೀಡುತ್ತಾ, ಅನೇಕ ಪೂಜ್ಯರ ಶ್ರಮದಿಂದಾಗಿ 60 ವಸಂತಗಳನ್ನು ಪೂರೈಸಿರುವ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಸುಮಾರು 1800 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು, 60 ಕ್ಕಿಂತ ಹೆಚ್ಚು ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಪ್ರಾಚಾರ್ಯ ಡಾ. ಎಸ್.ಪಿ. ತಳವಾರ ಮಾತನಾಡಿ, ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇಲ್ಲಿಯ ವಿದ್ಯಾರ್ಥಿಗಳು ಸಮಾಜವನ್ನು ಕಟ್ಟುವಂತ ಕೆಲಸ ಮಾಡಬೇಕು. ನಿಮ್ಮೊಂದಿಗೆ ಸದಾ ಬೆನ್ನಲುಬಾಗಿ ನಿಲ್ಲುತ್ತೇವೆ ಎಂದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಪಪೂ ಯತೀಶ್ವರಾನಂದ ಶ್ರೀಗಳು, ಪಪೂ ಡಾ. ಶ್ರದ್ಧಾನಂದ ಶ್ರೀಗಳು ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.
ಈ ವೇಳೆ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು, ಪದವಿ ಮತ್ತು ಪದವಿ ಪೂರ್ವ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕಾವೇರಿ ಶೆಮಡೆ ಮತ್ತು ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಬಿ. ನಂದಾಳೆ ಸ್ವಾಗತಿಸಿದರು. ಪ್ರೊ. ಎಂ.ಎಸ್. ಮಾಂಜರಿ ನಿರೂಪಿಸಿದರು. ಪ್ರೊ. ಟಿ.ವಿ. ಧಬಾಡೆ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 