ಬೆಂಗಳೂರು, ಮೇ 20,ರಾಜ್ಯದಲ್ಲಿ ಹೊಸದಾಗಿ 63 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ. ಈ ಪೈಕಿ 553 ಮಂದಿ ಗುಣಮುಖರಾಗಿದ್ದು, 41 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಹಾಸನವೊಂದರಲ್ಲೇ 21 ಪ್ರಕರಣ ದೃಢಪಟ್ಟಿವೆ. ಮಂಗಳವಾರ ಸಂಜೆ 5ರಿಂದ ಬುಧವಾರ ಮಧ್ಯಾಹ್ನದವರೆಗೆ ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 8, ಕಲಬುರಗಿಯಲ್ಲಿ 7, ಬೀದರ್ ನಲ್ಲಿ 10, ಹಾಸನದಲ್ಲಿ 21, ದಕ್ಷಿಣ ಕನ್ನಡದಲ್ಲಿ 1, ಉಡುಪಿಯಲ್ಲಿ 6, ತುಮಕೂರಿನಲ್ಲಿ 4, ಯಾದಗಿರಿಯಲ್ಲಿ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.