ಕೆಎಲ್ಇ ಸ್ವಾಯತ್ತ ವಿಶ್ವವಿದ್ಯಾಲಯದ ವತಿಯಿಂದ 63ನೇ ಕನ್ನಡ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಬೆಳಗಾವಿ, 3: ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯದ ವತಿಯಿಂದ 63ನೇ ಕನರ್ಾಟಕ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಸಮಾರಂಭವನ್ನು ನಾಡಗೀತೆಯೊಂದಿಗೆ ತಾಯಿ ಭುವನೇಶ್ವರಿಗೆ ಪೂಜೆ ನೆರವೇರಿಸುವುದರ ಮೂಲಕ ಆರಂಭಿಸಲಾಯಿತು.
ಮುಖ್ಯ ಅತಿಥಿಗಳಾದ ವಿಶ್ವವಿದ್ಯಾಲಯದ ಕುಲಪತಿಡಾ. ವಿವೇಕ ಸಾವಜಿಅವರು ಮಾತನಾಡಿಎಲ್ಲರೂ ಮಾತೃಭಾಷೆಯ ಬಗ್ಗೆ ಹೆಮ್ಮೆ ಹೊಂದಿರಬೇಕು ಮತ್ತು ದಿನನಿತ್ಯದ ವ್ಯವಹಾರವನ್ನು ಮಾತೃಭಾಷೆಯಲ್ಲಿ ಮಾಡಬೇಕೆಂದು ಕರೆ ನೀಡಿದರು. ಕುಲಸಚಿವರಾದ ಡಾ. ವಿ.ಡಿ.ಪಾಟೀಲರು ಮಾತನಾಡಿ ಬೆಳಗಾವಿ ನಗರದಲ್ಲಿ ಕನ್ನಡಭಾಷೆಯ ಉಳಿವಿಗೆ ಹಾಗೂ ಬೆಳವಣಿಗೆಗೆ ಕೆ.ಎಲ್.ಇ. ಸಂಸ್ಥೆಯ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಕೊಡುಗೆಯನ್ನು ಸ್ಮರಿಸಿದರು.
ಕೆ.ಎಲ್.ಇ. ಕನ್ನಡ ಬಳಗದ ಅಧ್ಯಕ್ಷೆ ಹಾಗೂ ಜವಾಹರಲಾಲ ನೆಹರುವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎನ್.ಎಸ್.ಮಹಾಂತಶೆಟ್ಟಿಯವರು ಮಾತನಾಡಿ ಎಲ್ಲ ಆರೋಗ್ಯ ವಿಜ್ಞಾನಗಳ ಕನ್ನಡೇತರ ವಿದ್ಯಾಥರ್ಿಗಳು ಕನ್ನಡ ಭಾಷೆಕಲಿತು ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಸಲಹೆ ನೀಡಿದರು. ಕನ್ನಡ ಬಳಗದ ಕಾರ್ಯಧ್ಯಕ್ಷರಾದ ಡಾ.ಜ್ಙಾನೇಶ ಡಿ.ಕೆ ಅವರು ಸ್ವಾಗತ ಭಾಷಣ ಮಾಡಿದರು. ಕನ್ನಡ ಬಳಗದ ಕಾರ್ಯದಶರ್ಿ ಶ್ರೀ ಪ್ರಸನ್ನ ಚಿಕ್ಕಮಠ ವಂದಿಸಿದರು. ಸಮಾರಂಭದ ಆಕರ್ಷಣೆಯಾಗಿದ್ದ 'ಅಂಗಾಂಗ ದಾನ' ಕುರಿತಾದ ಸ್ಥಬ್ದ ಚಿತ್ರಕ್ಕೆಜಿಲ್ಲಾ ಮಟ್ಟದ ಪಥಸಂಚಲನೆಯಲ್ಲಿ ಭಾಗವಹಿಸಲು ಎಲ್ಲಗಣ್ಯರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾಥರ್ಿಗಳು ಕನ್ನಡರಾಜ್ಯೋತ್ಶವ ಕುರಿತಾಗಿ ಹಾಡಿದರು ಮತ್ತು ಸಮೂಹ ನೃತ್ಯ ಪ್ರದಶರ್ಿಸಿದರು.
ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯ ಅಂಗಸಂಸ್ಥೆಗಳ ಪ್ರಾಂಶುಪಾಲರುಗಳು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಭಂದಿಗಳು ಹಾಗೂ 500ಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 