65ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ: ಕಾಷೀನಾಥ ಕುದರಿ ದಂಪತಿಗೆ ಸನ್ಮಾನ
65th Wedding Anniversary Celebration: Felicitation of the Kashinath Kudari Couple
ಹುಬ್ಬಳ್ಳಿ, ಜು. 11: ಬಸವೇಶ್ವರ ನಗರದ ನಿವಾಸಿ, ಕೆ.ಎಲ್.ಇ. ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ನಿವೃತ್ತ ಅಧೀಕ್ಷಕರಾದ ಕಾಷೀನಾಥ ಮಲ್ಲಪ್ಪ ಕುದರಿ ಹಾಗೂ ಅವರ ಪತ್ನಿ ಅನಸೂಯಾ ಕಾಷೀನಾಥ ಕುದರಿ ದಂಪತಿಯ 65ನೇ ವಿವಾಹ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಸಾಮಾಜಿಕ ಸಂಘಟನೆಗಳ ವತಿಯಿಂದ ಗೌರವ ಸಮರ್ಿಸಲಾಯಿತು. 92ನೇ ವಯಸ್ಸಿನಲ್ಲಿಯೂ ಕ್ರಿಯಾಶೀಲರಾಗಿರುವ ಕಾಷೀನಾಥ ಕುದರಿ ದಂಪತಿಯನ್ನು ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ದಂಪತಿಗೆ ಶುಭಾಶಯಗಳನ್ನು ಕೋರಿದ ಅವರು, ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷರು, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರು ಹಾಗೂ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ಸುರೇಶ್ ಡಿ. ಹೊರಕೇರಿ ಮಾತನಾಡಿ, ಕಾಷೀನಾಥ ಕುದರಿ ಅವರ ಶಿಕ್ಷಣ ಹಾಗೂ ಸಾಮಾಜಿಕ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಡಾ. ಶಶಿಧರ ಕಾಷೀನಾಥ ಕುದರಿ, ಸೀಮಾ ಶಶಿಧರ ಕುದರಿ, ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 