ಬೆಂಗಳೂರು, ಮೇ 20, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 67 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1462ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 556 ಜನರು ಗುಣಮುಖರಾಗಿದ್ದಾರೆ. ಒಟ್ಟ 864 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 42 ಜನರು ಮೃತಪಟ್ಟಿದ್ದಾರೆ. 15 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನದಲ್ಲಿ 21, ಬೀದರ್ ನಲ್ಲಿ 10, ಮಂಡ್ಯದಲ್ಲಿ 8, ಕಲಬುರಗಿಯಲ್ಲಿ 7, ಉಡುಪಿಯಲ್ಲಿ 6, ಬೆಂಗಳೂರು ನಗರ 4, ತುಮಕೂರು 4, ರಾಯಚೂರು 4, ಉತ್ತರ ಕನ್ನಡ, ದಕ್ಷಿಣಕನ್ನಡ ಮತ್ತು ಯಾದಗಿರಿಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. 67 ಪ್ರಕರಣಗಳ ಪೈಕಿ 52 ಜನರು ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇವರಲ್ಲಿ 51 ಜನರು ಮಹಾರಾಷ್ಟ್ರದಿಂದ ಆಗಮಿಸಿದ್ದಾರೆ. ಓರ್ವರು ವಿಶಾಖಪಟ್ಟಣದಿಂದ ಆಗಮಿಸಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ನಡುವೆ, ಬೆಂಗಳೂರು ನಗರದ 42 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇವರು ಮೇ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು ವೆಲ್ಲೂರಿಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಹೊಂದಿದ್ದರು ಎಂದರು. ಇಲ್ಲಿಯವರೆಗೆ ಬೆಂಗಳೂರಿನಲ್ಲಿ 28.53 ಲಕ್ಷ ಸೇರಿದಂತೆ ರಾಜ್ಯದಲ್ಲಿ ಒಟ್ಟು 63,53,248 ಜನರು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಲಕ್ಷ ಜನರು ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ ಎಂದರು. ಬುಧವಾರ ರಾಜಧಾನಿ ಎಕ್ಸ್ ಪ್ರೆಸ್ ಬೆಂಗಳೂರಿಗೆ ಬಂದಿದ್ದು, 180 ಜನರು ಆಗಮಿಸಿದ್ದಾರೆ.ರೈಲ್ವೆ ನಿಲ್ದಾಣದಲ್ಲಿ 22 ಜನರ ಸ್ವಾಬ್ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಓರ್ವ ಗರ್ಭಿಣಿ, 6 ಮಕ್ಕಳು 60 ವರ್ಷ ಮೇಲ್ಪಟ್ಟ 15 ವ್ಯಕ್ತಿಗಳಿದ್ದಾರೆ. ವಿಮಾನದಮೂಲಕ 94 ಲಕ್ಷ ಜನರು ಆಗಮಿಸಿದ್ದಾರೆ. ಇವರಲ್ಲಿ ಯಾರಲ್ಲೂ ಸೋಂಕಿನ ಲಕ್ಷಣಗಳಿಲ್ಲ ಎಂದು ತಿಳಿಸಿದರು. ಆರೋಗ್ಯ ಬುಲೆಟಿನ್ ನಲ್ಲಿ ಸೋಂಕಿತರ ಕುರಿತು ಮಾಹಿತಿ ನೀಡದಿರುವ ಕುರಿತು ವಿವರಣೆ ನೀಡಿದ ಅವರು, ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಡವಾಗಿ ದೊರೆಯುತ್ತಿದೆ.ಆದ್ದರಿಂದ ಅದನ್ನು ಪರಿಶೀಲಿಸಿ ಮಾಹಿತಿ ನೀಡಲು ತಡವಾಗುತ್ತಿದೆ. ಆದ್ದರಿಂದ ಇಂದು ಮಧ್ಯಾಹ್ನ ಸೋಂಕಿತರ ವಿವರ ನೀಡಲಾಗಿರಲಿಲ್ಲ. ಇನ್ನು ಮುಂದೆ ಹಿಂದಿನಂತೆ ಮಾಹಿತಿ ನೀಡಲಾಗುವುದು. ಇದರಲ್ಲಿ ಮುಚ್ಚಿಡುವ ಇಲ್ಲವೇ ಮುಜುಗರಪಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.