ವಿಜಯಪುರ ಮೇ. 23 : ಜಿಲ್ಲೆಯಲ್ಲಿ ಈವರೆಗೆ ಒಟ್ಟು 68 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 42 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 22 ಕೋವಿಡ್ ಸೋಂಕಿತ ರೋಗಿಗಳು ಸಕ್ರಿಯ ರೋಗಿಗಳಾಗಿದ್ದು, ಪರಿಣಾಮಕಾರಿಯಾದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 9014 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 1744 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 7225 ಜನರು (1 ರಿಂದ 28 ದಿನಗಳ) ರಿಪರ್ೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 4 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 9541 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 3774 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 5699 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.