ಬಳ್ಳಾರಿ 06: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ವರ್ಷದ ಮಹಾ ಪರಿನಿರ್ವಾಣ ದಿನ ಅಂಗವಾಗಿ ನಗರದ ಕೌಲ್‌ಬಜಾರ್‌ನ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರೆ್ಣ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ದಲಿತ ಮುಖಂಡರು, ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.