ಗದಗ 6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ ನಿಮಿತ್ತ ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು,ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗಗಳ ಸಮಾಜ ಮುಖಂಡರು, ಸರ್ವಸದಸ್ಯರು, ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸರ್ವರನ್ನು ಸ್ವಾಗತಿಸಿ ವಂದಿಸಿದರು. ಇದಕ್ಕೂ ಮುನ್ನ ಗದಗ ಬೆಟಗೇರಿ ನಗರಸಭೆಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರೆ್ಣ ಕಾರ್ಯಕ್ರಮ ಜರುಗಿತು.