7.27 ಕೋಟಿ ವೆಚ್ಚದ ಸ್ಮಾರ್ಟ ಸಿಟಿ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಬೆಳಗಾವಿ 01: ಸ್ಮಾರ್ಟ ಸಿಟಿ ಯೋಜನೆಯ ಅಡಿಯಲ್ಲಿ ಚನ್ನಮ್ಮ ನಗರ ಹಾಗೂ ಟಿಳಕವಾಡಿಗಳಲ್ಲಿ ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆ ಮತ್ತು ಅಲಂಕಾರಿಕ ಲೈಟ್ ಅಳವಡಿಕೆ ಕಾಮಗಾರಿಗೆ ಶಾಸಕ ಅಭಯ ಪಾಟೀಲ ಭಾನುವಾರ ಚಾಲನೆ ನೀಡಿದರು.
ಕೃಷ್ಣ ಕಾಲನಿ, ಸುಭಾಶ್ಚಂದ್ರ ನಗರ, 3ನೇ ರೈಲ್ವೆ ಗೇಟ್, ಪವಾರ್ ಚಾಳ, ವ್ಯಾಕ್ಸಿನ್ ಡಿಪೋ ಹಾಗೂ ಲೇಲೆಗ್ರೌಂಡ್ ಪ್ರದೇಶಗಳಲ್ಲಿ ಪ್ಯಾಕೇಜ್ 5ರ ಅಡಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಸುಮಾರು 88.24 ಕಿಮೀ ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆ, 165 ಫೀಡರ್ ಪಿಲ್ಲರ್ ಪ್ಯಾನೆಲ್ ನಿರ್ಮಾ ಣ, 11 ಟ್ರಾನ್ಸಫಾರ್ಮರ್ ಶಿಫ್ಟಿಂಗ್, 7 ಮೀಟರ್ ನ 19 ಹಾಗೂ 9 ಮೀಟರ್ ನ 276 ಅಲಂಕಾರಿಕ ಬೀದಿ ದೀಪದ ಕಂಬಗಳನ್ನು ಅಳವಡಿಸಲಾಗುತ್ತದೆ. 7.27 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಈ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.
ಚನ್ನಮ್ಮ ನಗರದ ಸರ್ವಾ೦ಗೀಣ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಮುಖ್ಯ ರಸ್ತೆ ಸೇರಿದಂತೆ ಎಲ್ಲ ರಸ್ತೆ ಕಾಮಗಾರಿಗಳನ್ನೂ ಸ್ಮಾರ್ಟ ಸಿಟಿ ಯೋಜನೆ ಹಾಗೂ ಇನ್ನಿತರ ಯೋಜನೆಗಳ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅಭಯ ಪಾಟೀಲ ತಿಳಿಸಿದರು.
ಚನ್ನಮ್ಮ ನಗರದ ಕುಡಿಯುವ ನೀರಿನ ಸಮಸ್ಯೆ ಮತ್ತು ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಕೂಡ ಆದಷ್ಟು ಶೀಘ್ರ ಮುಕ್ತಿ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ಧೆಶಕ ಶಶಿಧರ ಕುರೇರ್ ಮಾತನಾಡಿ, ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸಬೇಕು ಎಂದೂ ಅವರು ತಿಳಿಸಿದರು.
ಸ್ಮಾರ್ಟ ಸಿಟಿ ಯೋಜನೆಯ ಅಧಿಕಾರಿಗಳು, ಗುತ್ತಿಗೆದಾರರು, ಚನ್ನಮ್ಮ ನಗರದ ಹಿರಿಯ ನಾಗರಿಕರು, ಸಾರ್ವಜನಿಕರ ಹೆಚ್ಚಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 