ಕಲುಷಿತ ನೀರು ಸೇವಿಸಿ 7 ಸಾವು, 100ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ
7 dead, over 100 hospitalized after drinking contaminated water
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರ ಮತ್ತು ವಾಂತಿಯಿಂದ ಈವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದ್ದಾರೆ.
ಅತಿಸಾರದಿಂದಾಗಿ ಭಗೀರಥಪುರದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಅತಿಸಾರ ಮತ್ತು ವಾಂತಿಯಿಂದ ಬಳಲುತ್ತಿರುವ ಇನ್ನೂ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೂ ಮೃತಪಟ್ಟಿದ್ದಾರೆ ಎಂದು ಮೇಯರ್ ಭಾರ್ಗವ ತಿಳಿಸಿದ್ದಾರೆ.ಪ್ರಾಥಮಿಕ ಮೂಲಗಳ ಪ್ರಕಾರ, ಕುಡಿಯುವ ನೀರಿನ ಪೈಪ್ಲೈನ್ಗೆ ಒಳಚರಂಡಿ ನೀರು ಸೇರಿದ್ದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಏತನ್ಮಧ್ಯೆ, ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರದಿಂದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ತಿಳಿಸಿದ್ದಾರೆ.ಅತಿಸಾರದಿಂದ ಬಳಲುತ್ತಿರುವ 149 ಜನರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕಲುಷಿತ ನೀರು ಸೇವನೆಯಿಂದ ಭಗೀರಥಪುರ ಪ್ರದೇಶದಲ್ಲಿ ಕಳೆದ ಒಂದು ವಾರದಲ್ಲಿ 6 ಮಹಿಳೆಯರು ಸೇರಿದಂತೆ ಕನಿಷ್ಠ 8 ಜನ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 