ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ರೈತರ ಸಾವು
ಬೆಳಗಾವಿ, ಫೆ.8, ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೭ ಮಂದಿ ಸಾವನ್ನಪ್ಪುವ ಮೂಲಕ ರಾಜ್ಯದ ಜನರಿಗೆ ಇಂದು ಕರಾಳ ಶನಿವಾರವಾದಂತಾಗಿದೆ.ಜಿಲ್ಲೆಯಯ ಖಾನಾಪೂರ ತಾಲೂಕಿನ ಬೋಗೂರ ಗ್ರಾಮದ ಸಮೀಪ ಕೃಷಿ ಕಾರ್ಮಿಕರು ಕಬ್ಬು ಕಟಾವಿಗಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಒಂದು ಹಳ್ಳದ ಸೇತುವೆ ಕೆಳಗೆ ಬಿದ್ದಿ ಈ ದುರಂತ ಸಂಭವಿಸಿದೆ.ಬೋಗೂರು ಗ್ರಾಮದ ಕೃಷಿ ಕಾರ್ಮಿಕರು ಟ್ರ್ಯಾಕ್ಟರ್ ನಲ್ಲಿ ಇಟಗಿ ಗ್ರಾಮದತ್ತ ತೆರಳುವಾಗ ಮಾರ್ಗಮಧ್ಯದಲ್ಲಿ ತಟ್ಟಿ ಹಳ್ಳದ ಸೇತುವೆ ಬಳಿ ಚಾಲಕನ ಇಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿದೆ. ಟ್ರ್ಯಾಕ್ಟರ್ ಸುಮಾರು ೫೦ ಅಡಿ ಎತ್ತರದಿಂದ ಕೆಳಗೆ ಉರುಳಿದೆ. ದರುಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದು, ೩೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯ ಅಸುನೀಗಿದ್ದಾರೆ. ಗಾಯಗೊಂಡವರಲ್ಲಿ 10ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತರಾದವರು ಹಾಗೂ ಗಾಯಗೊಂಡವರು ಬೋಗೂರು ಗ್ರಾಮದವರಾಗಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಸುಮಾರು ೪೦ ಜನ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು, ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 