ಕಲಬುರಗಿ ಜಿಲ್ಲಾ ಕಾಂಗ್ರೆಸ್ ನಿಂದ 7ಲಕ್ಷ ರೂ ದೇಣಿಗೆ

ಕಲಬುರ್ಗಿ, ಜ 31, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲಾ ಕಾಂಗ್ರೆಸ್  ವತಿಯಿಂದ 7 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ.ಇದೇ ಫ್ರೆಬ್ರುವರಿ 5, 6 ಮತ್ತು 7ರಂದು ಮೂರು ದಿನಗಳ ಕಾಲ ನಗರದ ಗುಲ್ಬರ್ಗ ವಿವಿ ಆವರಣದಲ್ಲಿ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.  ಈಗಾಗಲೇ ವಿವಿಧ ಸಂಘ-ಸಂಸ್ಥೆಗಳು ದೇಣಿಗೆ ನೀಡಿವೆ.  ಇಂದು ಶಾಸಕ ಪ್ರಿಯಾಂಕ ಖರ್ಗೆ, ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರ್ಗಿ ಜಿಲ್ಲಾ ಸಿಇಓ ರಾಜಾ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ 7 ಲಕ್ಷ ರೂ.‌ ಚೆಕ್ ಹಸ್ತಾಂತರಿಸಿದರು.ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಶರತ್ ತಮ್ಮ ಒಂದು ತಿಂಗಳ ವೇತನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆಯಾಗಿ ನೀಡಿದ್ದರು.