70ಸಾವಿರ ಮೌಲ್ಯದ ಅಕ್ರಮ ಮದ್ಯ ಮಾರಾಟ: ಮೂವರ ಬಂಧನ

ಲೋಕದರ್ಶನವರದಿ

ಬ್ಯಾಡಗಿ10: ತಾಲೂಕಿನ ವಿವಿಧೆಡೆ ಗುರುವಾರ ಬೆಳಗಿನ ಜಾವ ರಸ್ತೆ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 70  ಸಾವಿರ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. 

     ಹಾವೇರಿ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿದರ್ೆಶನದ ಮೇರೆಗೆ ಬ್ಯಾಡಗಿ ವಲಯದ ಅಬಕಾರಿ ನಿರೀಕ್ಷಕರಾದ ಜೆ. ಕೆ. ಶೀಲಾ, ಉಪ ನಿರೀಕ್ಷಕ ಪ್ರಕಾಶ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಗುರುವಾರ ಬೆಳಗಿನ ಜಾವ ಗಸ್ತಿನ ಸಂದರ್ಭದಲ್ಲಿ ಅಕ್ರಮ ಮದ್ಯ ಸಾಗಾಟವನ್ನು ಹಿಡಿದ ಅವರು ಆರೋಪಿತರಿಂದ ಒಟ್ಟು 60.48 ಲೀಟರ್ ಬ್ಯಾಕ್ ಪೈಫೇರ್ ಮದ್ಯವನ್ನು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಹಾವೇರಿಯ ಇಬ್ಬರು ಹಾಗೂ ಬ್ಯಾಡಗಿ ತಾಲೂಕಿನ ಹಿರೇಹಳ್ಳಿ ಓರ್ವ ಸೇರಿದಂತೆ ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿ, ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.