700 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥ: ಲಾಡಖಾನ್
ಲೋಕದರ್ಶನವರದಿ
ಹಾವೇರಿ11: ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲೆಯ 700 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ಶ್ರೀಮತಿ ವೈ.ಎಲ್.ಲಾಡಖಾನ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ನ್ಯಾಯಾಲಯಗಳಲ್ಲಿ ಎರಡನೆಯ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಕಕ್ಷಿಗಾರರು ಭಾಗವಹಿಸಿದ್ದರು.
ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾಮರ್ಿಕರ ವೇತನ, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರ ಸಿವಿಲ್ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ, ಕಾಮರ್ಿಕ ವಿವಾದ, ಭೂಸ್ವಾಧೀನ, ಕಂದಾಯ ಪ್ರಕರಣಗಳು, ಸಿವಿಲ್ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ ನಡೆಸಲಾಯಿತು.
700 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಯಿತು ಮತ್ತು ರೂ.4,89,82,028-00 ಗಳ ಪರಿಹಾರಧನ ವಿತರಣೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 