ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 70 ನೇ ಕನ್ನಡ ರಾಜ್ಯೋತ್ಸವ
70th Kannada Rajyotsava at Ghanamateshwara Educational Institute
ಲೋಕದರ್ಶನ ವರದಿ
ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 70 ನೇ ಕನ್ನಡ ರಾಜ್ಯೋತ್ಸವ
ತಾಳಿಕೋಟೆ 02: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 70 ನೇ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು ಶನಿವಾರದಂದು ಆಚರಿಸಲಾಯಿತು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ಮಾತನಾಡಿ ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ಎಸ್ ಎನ್ ಸಜ್ಜನ್ ಸರ್ ಅವರು ಮಾತನಾಡಿ ಕನ್ನಡ ನಾಡು-ನುಡಿ ಜಲ ಹಾಗೂ ಕನ್ನಡದ ವೈಭವದ ಬಗ್ಗೆ ಹಾಗೂ ದಿವ್ಯ ಪರಂಪರೆಯ ಬಗ್ಗೆ ಸಂಸ್ಕೃತಿಯ ಬಗ್ಗೆ ಮಕ್ಕಳು ಕನ್ನಡ ಭಾಷೆ ಹಾಗೂ ಈ ಒಂದು ಸಂಸ್ಕೃತಿಯನ್ನು ಯಥೇಚ್ಛವಾಗಿ ಅಳವಡಿಸಿಕೊಂಡು ಹೆಚ್ಚಿಸಬೇಕೆಂದು ತಿಳಿಸಿಕೊಟ್ಟರು.
ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿರ್ತಕ್ಕಂತ ಬಸವರಾಜ್ ಸಜ್ಜನ್ ಸರ್ ಅವರು ಮಾತನಾಡಿ ಸ್ವತಂತ್ರ ನಂತರದ ಭಾರತದಲ್ಲಿ ಕರ್ನಾಟಕ ಹಲವು ಪ್ರದೇಶಗಳಲ್ಲಿ ಹರಿದು ಹಂಚಿ ಹೋಗಿ ಅದನ್ನು ಒಗ್ಗೂಡಿಸಿ ಅಖಂಡ ಕರ್ನಾಟಕವನ್ನು ನಿರ್ಮಾಣ ಮಾಡುವಲ್ಲಿ ಕನ್ನಡ ನಾಡಿನ ಹೋರಾಟಗಾರರ ಪಾತ್ರ ತ್ಯಾಗ ಬಲಿದಾನಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಈ ಸಮಯದಲ್ಲಿ ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಪಿಯು ಕಾಲೇಜ್ ಪ್ರಾಚಾರ್ಯ ಬಿ.ಎಸ್ ಮಾಲಿಪಾಟೀಲ್ ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿರೂಪಣೆ ಕಲ್ಮೇಶ ಸರ್ ನಡೆಸಿಕೊಟ್ಟರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 