ರನ್ನ ಬೆಳಗಲಿ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ
70th Kannada Rajyotsava at Ranna Belagali Government Girls' School
ಲೋಕದರ್ಶನ ವರದಿ
ರನ್ನ ಬೆಳಗಲಿ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ
ರನ್ನ ಬೆಳಗಲಿ:ನ 02. : ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ದಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಿತು.
ಯೋಗ ಶಿಕ್ಷಕ ರಾಘವೇಂದ್ರ ನೀಲನ್ನವರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭಾರತಾಂಬೆಯ ಜ್ಯೇಷ್ಠ ಪುತ್ರಿ ಕನ್ನಡಾಂಬೆ. ಮಾತೃಭಾಷೆಯಲ್ಲಿ ಶಿಕ್ಷಣ ಕಲಿತ ವ್ಯಕ್ತಿ ಎಲ್ಲಾ ಭಾಷೆಗಳ ಮೇಲೆ ಹಿಡಿತವನ್ನು ಸಾಧಿಸ ಬಲ್ಲ.ನಮ್ಮ ಕನ್ನಡ ಭಾಷೆಯನ್ನು ಕಲಿಯುತ್ತಾ ಇತರರಿಗೂ ಕಲಿಸೋಣ. ಮನ ಮನೆಗಳಲ್ಲಿ ಕನ್ನಡ ರಾರಾಜಿಸಲಿ ಎಂದು ತಿಳಿಸಿದರು.
ಶಿಕ್ಷಕಿ ಎಸ್ ಪಿ ಜೋಶಿ ನಾಡ ಧ್ವಜಾರೋಹಣ ನೆರವೇರಿಸಿ ಕನ್ನಡ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಈ ನಾಡು,ನುಡಿಯ ರಕ್ಷಣೆಗಾಗಿ. ಅನೇಕ ಮಹನೀರು ತಮ್ಮದೇ ಆದಂತಾ ವಿವಿಧ ಕ್ಷೇತ್ರಗಳಲ್ಲಿ ನಾಡಿನ ಏಕತೆಗಾಗಿ ದೇಶದ ಭದ್ರತೆಗಾಗಿ ಶ್ರಮಿಸಿದ್ದಾರೆ ಅವರನ್ನು ನೆನಪಿಸಿ ಗೌರವಿಸೋಣ ಎಂದು ತಿಳಿಸಿದರು.
ಮುಖ್ಯೋಪಾಧ್ಯಾಯ ಆರ್ ಡಿ ಗಲಗಲಿ ಪ್ರಾಸ್ತಾವಿಕವಾಗಿ ಮಾತಾಡುತ್ತಾ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕನ್ನಡ ಅಂಕಿ ಬರೆಯುವ ಸ್ಪರ್ಧೆ, ರಾಜ್ಯೋತ್ಸವದ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಹಾಗೂ ವಚನ ಮತ್ತು ಗಾಧೆಮಾತು ಹೇಳುವ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಿಕ್ಷಕಿಯರಾದ ಆರ್ ಡಿ ಬಂಡಿ, ಎಚ್ ಬಿ ಜಮಾದಾರ, ಎಸ್ ಹೆಚ್ ಮಾದರ ಮತ್ತು ಆರ್ ಟಿ ದಂಡಿನ ಬಹುಮಾನಗಳು ನೀಡಿ ಪ್ರೋತ್ಸಾಹಿಸಿದರು. ಎಸ್. ಡಿ.ಎಮ್.ಸಿ ಅಧ್ಯಕ್ಷ ಯಮುನಪ್ಪ ಆಲಗೂರ ಮತ್ತು ಸದಸ್ಯರು ಪಾಲಕ, ಪೋಷಕರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 