ನ.01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ
70th Karnataka Rajyotsava Day Celebration Program on Nov. 01
ಬಳ್ಳಾರಿ,ಅ.30: ಜಿಲ್ಲಾಡಳಿತ ವತಿಯಿಂದ ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರಿ್ಡಸಲಾಗಿದೆ.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸುವರು. ಬಳಿಕ ಬೆಳಿಗ್ಗೆ 09.15 ಕ್ಕೆ ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಬಳಿಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಸಂದೇಶ ನೀಡುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿ ವಲಯ ಪೊಲೀಸ್ ಮಹಾನೀರೀಕ್ಷಕರಾದ ವರ್ತಿಕಾ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 