ಅ.23 ರಿಂದ 108 ಶಾಂತಿಸಾಗರ ಮಹಾರಾಜರ 70ನೇ ಪುಣ್ಯತಿಥಿ
70th death anniversary of 108 Shantisagar Maharaja from 23rd August
ಜಮಖಂಡಿ 23: ನಗರದಲ್ಲಿ ದಕ್ಷಿಣ ಭಾರತ ಜೈನ ಸಭಾ, ವೀರ ಸೇವಾದಳ ಮಧ್ಯವರ್ತಿ ಸಮಿತಿ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಅ.23 ರಿಂದ 25 ರವರೆಗೆ ಸಮಾಧಿ ಸಾಮ್ರಾಟ, ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ 108 ಶಾಂತಿಸಾಗರ ಮಹಾರಾಜರ 70ನೇ ಪುಣ್ಯತಿಥಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜೈನ ಸಮಾಜದ ಹಿರಿಯ ಮುಖಂಡ ಅರುಣಕುಮಾರ ಶಹಾ ಹೇಳಿದರು.
ನಗರದ ಕಡಪಟ್ಟಿ ಜೈನ ಬಸದಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬಸವ ಭವನದಲ್ಲಿ ಅ.23 ರಂದು ಬೆಳಗ್ಗೆ 9 ಗಂಟೆಗೆ ಯುವಕ-ಯುವತಿಯರ ಸಮ್ಮೇಳನ ಜರುಗಲಿದೆ. ಅದಕ್ಕೂ ಮುನ್ನ ಬೈಕ್ ರ್ಯಾಲಿ ಜರುಗಲಿದ್ದು. ಅ.24 ರಂದು ಬೆಳಗ್ಗೆ 9 ಗಂಟೆಗೆ ಶಾಲಾ ಮಕ್ಕಳ ಭಾಷಣ ಸ್ಪರ್ಧೆಗಳು, ಅ. 25 ರಂದು ಬಿಎಲ್ ಡಿಇ ಮೈದಾನದಲ್ಲಿ ಬೆಳಗ್ಗೆ 11.30ಕ್ಕೆ ನಡೆಯುವ 108 ಶಾಂತಿಸಾಗರ ಮಹಾರಾಜರ 70ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ನಾಂದಣಿ ಸಂಸ್ಥಾನ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ಕೊಲ್ಲಾಪೂರ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ಶ್ರವಣಬೆಳಗೊಳ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ಹುಂಚ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ಸೋಂದಾ ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ವರೂರ ನವಗ್ರಹ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು ಸೇರಿದಂತೆ ಅನೇಕ ಹಾಲಿ, ಮಾಜಿ ಶಾಸಕರುಗಳು, ಸಚಿವರು, ಸಂಸದರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.
25 ವ್ಯಸನ ಮುಕ್ತ ಭಾವಚಿತ್ರಗಳ ಬ್ಯಾನರ್‌ಗಳ ಮೂಲಕ ಭವ್ಯವಾದ ಮೆರವಣಿಗೆ ಆ. 25 ರಂದು ಬೆಳಗ್ಗೆ 9 ಗಂಟೆಗೆ ಎಪಿಎಂಸಿ, ಅಶೋಕ ಸರ್ಕಲ್, ಗವಳಿ ಗಲ್ಲಿ ಹನುಮಾನ ಚೌಕ್ ಸೇರಿ ನಗರದ ಪ್ರಮುಖ ಬೀದಿಗಳಲ್ಲಿ 10 ಸಾವಿರಕ್ಕೂ ಅಧಿಕ ಜನರಿಂದ ವ್ಯಸನ ಮುಕ್ತ ಮೆರವಣಿಗೆ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ ಅಂದಾಜು 30 ಸಾವಿರ ಜನರು ಸೇರುವ ನೀರೀಕ್ಷೆ ಇದೆ ಅದಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಸುಶಿಲಕುಮಾರ ಬೆಳಗಲಿ, ಸಿ.ಟಿ. ಉಪಾಧ್ಯ, ವರ್ಧಮಾನ ನ್ಯಾಮಗೌಡ ಮಾತನಾಡಿದರು. ದೇವಲ ದೇಸಾಯಿ, ದಯಾನಂದ ಶಿರಗಾರ, ಅಣ್ಣಪ್ಪ ನಂದಗಾಂವ, ಧರೆಪ್ಪ ಅಲಗೂರ, ಮಹಾವೀರ ಪಾಟೀಲ, ಸಾಗರ ಅಲಗೂರ, ನೆಮಣ್ಣ ಜಕನೂರ, ಪದ್ಮಣ್ಣ ಜಕನೂರ, ಬಸವರಾಜ ಆಲಗೂರ ಸೇರಿದಂತೆ ಅನೇಕ ಜೈನ್ ಸಮಾಜದ ಮುಖಂಡರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 