ನವದೆಹಲಿ, ಏ 3, ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ದೇಶ ನಡೆಸುತ್ತಿರುವ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ತನ್ನ ರಾಜ್ಯ ಅಂಗ ಸಂಸ್ಥೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್ಎಸ್ ಎಫ್) ಗಳಿಂದ 71 ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಿದೆ.'' ಕೊರೊನಾ ವೈರಸ್ ಸೋಂಕಿನ ವಿರುದ್ಧ ದೇಶ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸುವ ಜತೆಗೆ ಪರಿಹಾರ ನೀಡಿರುವ ಎನ್ಎಸ್ ಎಫ್ ಗಳು, ರಾಜ್ಯ ಅಂಗ ಸಂಸ್ಥೆಗಳು ಮತ್ತು ಇತರ ಒಕ್ಕೂಟಗಳಿಗೆ ಐಒಎ ಕೃತಜ್ಞತೆ ಸಲ್ಲಿಸುತ್ತದೆ,'' ಎಂದು ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.ಈ ಮಧ್ಯೆ ಅಂಗ ಸಂಸ್ಥೆಗಳಿಂದ ಸಂಗ್ರಹಿಸಿರುವ ದೇಣಿಗೆಯನ್ನು ಪಿಎಂ ಕೇರ್ಸ್ ನಿಧಿಗೆ ವರ್ಗಾಯಿಸಲಾಗುವುದು ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.