71ನೇ ಗಣರಾಜ್ಯೋತ್ಸವ: ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ

ಕೊಪ್ಪಳ 27: 71ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಇಂದು (ಜ.26) ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅವರು ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು. 

ನಂತರ ಅವರು ಮಾತನಾಡಿ, ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಆಡಳಿತ ವರ್ಗ ಸರಿಯಾಗಿ ಕೈಗೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು.  ಸಕರ್ಾರಿ ಕಚೇರಿಗಳಿಗೆ ಬರುವ ಜನ ಸಾಮಾನ್ಯರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕು.  ನಮ್ಮ ಕರ್ತವ್ಯವನ್ನು ದೇಶ ಸೇವೆ ಎಂದು ಭಾವಿಸಿ ಕಾರ್ಯನಿರ್ವಹಿಸೋಣ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  

ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ಆಹಾರ ನಾಗರಿಕರ ಸರಬರಾಜು ಇಲಾಖೆ ಉಪನಿದರ್ೇಶಕ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ, ಜಿ.ಪಂ. ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.