ಮಾಸ್ಕೋದಲ್ಲಿ ಕೊರೊನಾ ಸೋಂಕಿಗೆ ಮತ್ತೆ 73 ಬಲಿ

ಮಾಸ್ಕೋ, ಮೇ 22,ಮಾಸ್ಕೋದಲ್ಲಿ ಕಳೆದ 24 ಗಂಟೆಗಳಲ್ಲಿ 73 ಜನರು ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಪ್ರತಿಕ್ರಿಯಾ ಕೇಂದ್ರ ತಿಳಿಸಿದೆ  ನ್ಯುಮೋನಿಯಾದಿಂದ ಬಳಲುತ್ತಿದ್ದ 73 ಜನರಲ್ಲಿ ಕೊರೊನಾ ವೈರಾಣು ಸೋಂಕು ದೃಢಪಟ್ಟಿದ್ದು ಅವರು ಮಾಸ್ಕೋದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಈವರೆಗೆ ರಷ್ಯಾ ರಾಜಧಾನಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,867 ಕ್ಕೆ ಏರಿಕೆಯಾಗಿದೆ. ಬುಧವಾರದಂದು 68 ಜನರು ಮಾಸ್ಕೋದಲ್ಲಿ ಸೋಂಕಿಗೆ ಬಲಿಯಾಗಿದ್ದರು.

ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಕೋವಿಡ್ – 19 ಅನ್ನು ಸಾಂಕ್ರಾಮಿಕ ಎಂದು ಘೋಷಿಸಿತ್ತು. ಈವರೆಗೆ ಜಗತ್ತಿನಾದ್ಯಂತ ಸುಮಾರು 50 ಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದು 3,31,000 ಕ್ಕೂ ಹೆಚ್ಚು ಜನರು ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.ರಷ್ಯಾದಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. 3,17,554 ಪ್ರಕರಣಗಳು ದೃಢಪಟ್ಟಿದ್ದು ಈ ಪೈಕಿ 92,681 ಜನರು ಚೇತರಿಸಿಕೊಂಡಿದ್ದು 3009 ಜನರು ಗುಣಮುಖರಾಗಿದ್ದಾರೆ.