ವಿಜಯಪುರದಲ್ಲಿ ಮೇ-17 ರಿಂದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಪಂದ್ಯಾಟದಲ್ಲಿ 756 ಆಟಗಾರರು ಭಾಗಿ
756 players participate in state-level badminton tournament from May 17 in Vijayapura
ಲೋಕದರ್ಶನ ವರದಿ
ವಿಜಯಪುರ, ಮೇ.16 : ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರ್ಪ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಪಂದ್ಯಾವಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಉದ್ಘಾಟಿಸಲಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅಸೋಸಿಯೇಷನ್ ಹಿನ್ನೆಲೆ: 1951 ರಲ್ಲಿ ಮೈಸೂರು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಗಿ ಆರಂಭಗೊಂಡ ಸಂಸ್ಥೆ, 1972 ರಲ್ಲಿ ಕರ್ನಾಟಕ ನಾಮಕರಣದ ಬಳಿಕ 'ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್' ಎಂದು ಮರುನಾಮಕರಣಗೊಂಡಿತು. ಮೈಸೂರು ಒಡೆಯರಿಂದ ಆರಂಭಗೊಂಡ ಈ ಸಂಸ್ಥೆ 1992 ರ ವೇಳೆಗೆ ದೊಡ್ಡ ಸಂಸ್ಥೆಯಾಗಿ ಬೆಳೆದು, ಇಂದು ದೇಶದಲ್ಲೇ ಪ್ರಮುಖ ಬ್ಯಾಡ್ಮಿಂಟನ್ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಕುಮಾರ ಬಂಗಾರ್ಪ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್.ಎಸ್. ಕೋರಿ, ಗೀರೀಶ ಕುಲ್ಲೊಳ್ಳಿ, ಯುವಜನ ಸೇವೆ ಮತ್ತು ಸಬಲೀಕರ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಜಿಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 