ಕ್ವಿಟ್ ಇಂಡಿಯಾ ಚಳುವಳಿಯ 76ನೇ ವಾಷರ್ಿಕೋತ್ಸವ
ಲೋಕದರ್ಶನ ವರದಿ ಹಾವೇರಿ: ನಮ್ಮ ದೇಶವನ್ನು ಬ್ರಿಟಿಷರ ಸಂಕೋಲೆಯಿಂದ ಮುಕ್ತಗೊಳಿಸಲು ಶ್ರಮಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಇಂದಿನ ಪೀಳಿಗೆ ಮರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಹೋರಾಟದ ಜೀವನವನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವುದು ಇಂದಿನ ಅಗತ್ಯ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಅಭಿಪ್ರಾಯಪಟ್ಟರು.
ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಜರುಗಿದ ಕ್ವಿಟ್ ಇಂಡಿಯಾ ಚಳುವಳಿಯ 76ನೇ ವಾಷರ್ಿಕೋತ್ಸವ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸ್ವಾತಂತ್ರ್ಯ ಪಡೆದ ಬಳಿಕ ಕಾಂಗ್ರೆಸ್ ದೇಶದ ಹಲವು ಸಮಸ್ಯೆಗಳನ್ನು ನಿವಾರಿಸಲು ಯತ್ನಿಸಿತು. ಅವುಗಳ ಪೈಕಿ ಗರೀಬಿ ಹಠಾವೋ, ಅಣೆಕಟ್ಟು ನಿಮರ್ಾಣ, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸೇರಿದಂತೆ ಹಲವು ಮೂಲ ಸೌಕರ್ಯ ಒದಗಿಸಲು ಯತ್ನಿಸಿತು.
ಇದರ ಪರಿಣಾಮವಾಗಿ ದೇಶ ಇಂದು ಎಲ್ಲ ಕ್ಷೇತ್ರಗಳಲ್ಲಿ ಸಮೃದ್ಧಿಯತ್ತ ಸಾಗುತ್ತಿದೆ. ಬ್ರಿಟಿಷರು ನಮ್ಮ ದೇಶದ ಸಂಪತ್ತನ್ನು ಲೂಟಿ ಮಾಡಿದರು. ಆದರೆ ಕಾಂಗ್ರೆಸ್ ದೇಶದಲ್ಲಿನ ಹಲವು ಸಂಕಷ್ಟಗಳನ್ನು ಮೀರಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿತು ಎಂದರು.
ಮಾಜಿ ಸಚಿವ ಮನೋಹರ ತಹಶೀಲ್ದಾರ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ನಮ್ಮ ದೇಶಕ್ಕೆ ರಕ್ತರಹಿತ ಹೋರಾಟದಿಂದ ಅಹಿಂಸೆ ಮತ್ತು ಅಸಹಕಾರ ಚಳುವಳಿ ಮೂಲಕ ಬ್ರಿಟಿಷರನ್ನು ವಿರೋಧಿಸಿದರು. ದೇಶದ ಸ್ವಾತಂತ್ರ್ಯಕ್ಕೆ ಜನರನ್ನು ಹುರಿದುಂಬಿಸಲು ಮಾಡು ಇಲ್ಲವೇ ಮಡಿ ಎಂಬ ಘೋಷಣೆ ಮೊಳಗಿಸಿದರು. ಇದರ ಪರಿಣಾಮವಾಗಿ ದೇಶಾದ್ಯಂತ ಹೊಸ ಸಂಚಲನ ಉಂಟಾಯಿತು ಎಂದರು.
ಕೆಪಿಸಿಸಿ ಸದಸ್ಯ ಡಿ.ಬಸವರಾಜ, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಸಿ.ಶಿಡೇನೂರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರೇಕೆರೂರ ಶಾಸಕ ಬಿ.ಸಿ. ಪಾಟೀಲ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಮಾಜಿ ಶಾಸಕ ಸಯ್ಯದ್ ಅಜ್ಜಂಫೀರ್ ಖಾದ್ರಿ, ಜಿಪಂ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾದೇಗೌಡ ಗಾಜಿಗೌಡ್ರ, ಪ್ರಕಾಶಗೌಡ ಪಾಟೀಲ, ಎಂ.ಎಂ. ಮೈದೂರ, ಎಂ.ಎನ್. ವೆಂಕೋಜಿ, ಶಿವಕುಮಾರ ತಾವರಗಿ, ಜಯಶ್ರೀ ಶಿವಪುರ, ದಾವಲಸಾಬ ಹಿರೇಮುಗದೂರ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 