ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ
ಬಳ್ಳಾರಿ 26: 76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು.ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜ ಮೇರಿ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ತೇಜ, ದಿವಾಕರ, ಪತ್ರಕರ್ತರಾದ ಮಲ್ಲಿಕಾರ್ಜುನ ಚಿಲ್ಕರಾಗಿ, ರಮೇಶ್ ಹಾಗು ಪೀರಸಾಬ್ ಇದ್ದರು.