ಜಿಲ್ಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

76th Republic Day celebrations at Commerce and Industry Institute in the district

ಜಿಲ್ಲೆಯಲ್ಲಿ  ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ              

        ಬಳ್ಳಾರಿ: 26 ನಗರದಲ್ಲಿ  ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ರಾಷ್ಟೊಪಿತ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣವವನ್ನು ನೆರವೇರಿಸಿದರು.ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶ್ರೀ ಯಶವಂತರಾಜ್ ನಾಗಿರೆಡ್ಡಿ ಅವರು, ದೇಶದಲ್ಲಿ ಸಂವಿಧಾನ ಜಾರಿಯಾದ ದಿನ ಇದಾಗಿದ್ದು, ಬಲಿಷ್ಠ ಮತ್ತು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ಭಾರತ ದೇಶದ್ದಾಗಿದೆ ಎಂದರು. ಭಾರತ ಸಂವಿಧಾನವು 1949ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು. ಪ್ರತಿ ವರ್ಷ ಜನವರಿ 26 ರಂದು ಭಾರತ ದೇಶವು ಸಂವಿಧಾನ ಜಾರಿಗೆ ಬಂದ ದಿನವನ್ನು ಸ್ಮರಿಸಲು ಗಣರಾಜ್ಯೋತ್ಸವ ಎಂದು ಆಚರಣೆ ಮಾಡಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ  ಬಿ. ಮಹಾರುದ್ರಗೌಡ, ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರಾದ, ಗಿರಿಧರ ಸೊಂತ, ಗೌರವ ಕಾರ್ಯದರ್ಶಿಗಳಾದ ಕೆ.ಸಿ.ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಉಪ ಕಮಿಟಿಗಳ ಚೇರ್‌ಮನ್‌ಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.