ಎಸ್‌ಎಸ್ ವಿದ್ಯಾ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
77th Republic Day Celebrations at SS Vidya Sanstha
ತಾಳಿಕೋಟೆ 28: ಪಟ್ಟಣದ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಧ್ವಜಾರೋಹಣಕ್ಕೆ ಬಿಪಿಇಡಿ ಪ್ರಶಿಕ್ಷಣಾರ್ಥಿಗಳು ಪಥಸಂಚಲನದ ಮುಖಾಂತರ ಅಧ್ಯಕ್ಷರನ್ನು ಸ್ವಾಗತಿಸಿದರು. ಪಥಸಂಚಲನದ ನೇತೃತ್ವವನ್ನು ಪ್ರಾಚಾರ್ಯ ಶಿವಕುಮಾರ. ನಾಯಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಮ್.ಎಸ್.ರಾಯಗೊಂಡ ವಹಿಸಿದ್ದರು. ಧ್ವಜಾರೋಹಣವನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲರು ನೇರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಆದರ್ಶ ವಿದ್ಯಾರ್ಥಿಗಳು ಆಗಬೇಕು ಹಾಗೂ ಶಿಕ್ಷಕರು ಆದರ್ಶ ಶಿಕ್ಷಕರಾಗಬೇಕುಮನೆ ಮನೆಯಲ್ಲಿ ಸೈನಿಕರು ದೇಶ ಸೇವೆಗಾಗಿ ಸಿದ್ಧರಾಗಬೇಕು ಎಂದು ಹೇಳಿದರು.
ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ರೆಡ್ಡಿ ಮತ್ತು ಸಂಗಮೇಶ್ವರ ಪ್ರೌಢಶಾಲೆಯ ಶಿಕ್ಷಕ ಎಸ್.ಸಿ.ಗುಡಗುಂಟಿ ಗಣರಾಜ್ಯೋತ್ಸವ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಪ್ರಾಚಾರ್ಯರಾದ ಡಾ:ಎಚ್.ಬಿ. ನಡುವಿನಕೇರಿ, ಶಿವಕುಮಾರ ನಾಯಕ, ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ರೆಡ್ಡಿ, ವಿರೇಶ ಕನಕ,ಅಶೋಕ ಕಟ್ಟಿ, ಜೆ.ಸಿ.ಪಾಟೀಲ, ಬಿ.ಆಯ್.ಹಿರೇಹೊಳಿ, ವಿದ್ಯಾಸಂಸ್ಥೆಯ ಸಮಸ್ತ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಬಿ.ಆಯ್. ಹಿರೇಹೊಳಿ ನಿರೂಪಿಸಿ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 