77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ
77th Republic Day Flag Hoisting Ceremony
ಧಾರವಾಡ 27 : ಮನಸೂರು ಸಾಲಿಮಠ ಆಂಗ್ಲ ಮಾಧ್ಯಮ ಶಾಲೆಯ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನಸೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಖಿ. ಹಲಗಿ ಯವರು ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರಾದ ನ ಕೆ ಭಾವಿ ಯವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳು ಪಥ ಸಂಚಲನ ಮಾಡುವ ಮೂಲಕ ಧ್ವಜಕ್ಕೆ ಗೌರವ ಸಲ್ಲಿಸಿದರು. ನಂತರ ಶಾಲೆಯ ಅಧ್ಯಕ್ಷರಾದ ಎಸ್‌ವಿ ಸಾಲಿಮಠ ರವರು ಸಂವಿಧಾನದಲ್ಲಿರುವ ನಿಯಮಗಳು ಹಾಗೂ ಅದನ್ನು ಹೇಗೆ ಪಾಲನೆ ಮಾಡಬೇಕು ಮತ್ತು ಅದರ ಜೊತೆಗೆ ಸ್ವತಂತ್ರ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೂ ಇರುವ ನಡುವಿನ ವ್ಯತ್ಯಾಸವನ್ನು ತಿಳಿಸಿಕೊಟ್ಟರು.
ಹಾಗೆಯೇ ನಮ್ಮ ಶಾಲೆಯ ಹಿರಿಯ ಶಿಕ್ಷಕರಾದ ಡಿ.ವಿ. ಕುಲಕರ್ಣಿ ಅವರು ಪ್ರಜಾಪ್ರಭುತ್ವದ ಬಗ್ಗೆ ಬಾಬು ರಾಜೇಂದ್ರ್ರಸಾದ ಅವರಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಹೀಗೆ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನದ ಬಗ್ಗೆ ಬಹಳ ಸವಿಸ್ತಾರವಾಗಿ ಶಿಕ್ಷಕರು ತಿಳಿಸಿಕೊಟ್ಟರು. ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತದನಂತರ ಶಾಲೆಯಲ್ಲಿ ಸಂಸ್ಕೃತಿಕ ಕಾರ್ಯಕ್ರಮವನ್ನು ಕೈಗೊಳ್ಳುವ ಮೂಲಕ ಗಣರಾಜ್ಯೋತ್ಸವನ್ನು ಬಹಳ ವಿಶೇಷವಾಗಿ ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಭವಾನಿ ಅವರು ನಿರೂಪಣೆ ಮಾಡಿದರು ಹಾಗೂ ವಂದನಾರೆ್ಣಯನ್ನು ಸರೋಜಾ ಧಾರವಾಡ ಅವರು ನಿರ್ವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 