ಹೂವಿನಹಡಗಲಿಯಲ್ಲಿ 77 ನೇ ಗಣರಾಜೋತ್ಸವ ದಿನಾಚರಣೆ
77th Republic Day celebration at the Flower Boat
ಹೂವಿನಹಡಗಲಿ 27: ಸಂವಿಧಾನದಆಶಯ ಈಡೇರಿಸಲು ನಾವೆಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಜತೆಗೆ ಭಾರತ ದೇಶವನ್ನು ಬಲಿಷ್ಠಗೊಳಿಸಲು ಎಲ್ಲರೂ ಶ್ರಮಿಸೋಣ ಎಂದು ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ನಾಯಕರು, ಮಹನೀಯರು ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ. ದೇಶವನ್ನು ಸಮರ್ಕವಾಗಿ ಮುನ್ನಡೆಸಲು ಸಂವಿಧಾನ ಅವಶ್ಯವಾಗಿದೆ ಎಂದರು.
ಶಾಸಕ ಕೃಷ್ಣನಾಯ್ಕ ಮಾತನಾಡಿ, ದೇಶದ ಸಂವಿಧಾನದಿಂದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಶಕ್ತನಾಗಲು ಸಹಕರಿಸುತ್ತದೆ. ಎಲ್ಲ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಾಪಂ ಇಒ ಪರಮೇಶ್ವರ್ಪ, ಸಿಪಿಐ ದೀಪಕ್ ಆರ್. ಭೂಸರೆಡ್ಡಿ, ಸಮಾಜ ಕಲ್ಯಾಧಿಕಾರಿ ಆನಂದ್ ಡೊಳ್ಳಿನ್. ಸಿಡಿಪಿಒ ರಾಮನಗೌಡ, ಬಿಇಒ ಮಹೇಶ್ ಪೂಜಾರ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಕೊಟ್ರಗೌಡ, ಪುರಸಭೆ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 