ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ 78ನೇ ಸಂಸ್ಥಾಪನಾ ವರ್ಷಾಚಾರಣೆ ಕಾರ್ಯಕ್ರಮ
78th Foundation Anniversary Celebration of the SUCI Communist Party
ಲೋಕದರ್ಶನ ವರದಿ
ಧಾರವಾಡ 26: ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ 78ನೇ ಸಂಸ್ಥಾಪನಾ ವರ್ಷಾಚಾರಣೆ ಅಂಗವಾಗಿ ಇಂದು ಧಾರವಾಡ ಜಿಲ್ಲಾ ಸಮಿತಿಯಿಂದ ಪಕ್ಷದ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರು, ಕಾರ್ಮಿಕ ವರ್ಗದ ಮಹಾನ್ ನಾಯಕರಾದ ಕಾ. ಶಿವದಾಸ್ ಘೋಷ್ ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಇಂದು ಪ್ರಪಂಚದಾದ್ಯಂತ ಹಲವಾರು ದೇಶಗಳಲ್ಲಿ ಯುದ್ಧದ ವಾತಾವರಣವನ್ನು ಎದುರಿಸುತ್ತಿದ್ದೇವೆ. ಯಾವುದೇ ದೇಶ, ಭಾಷೆ, ಧರ್ಮದ ಗಡಿ ಇಲ್ಲದ ಮುಗ್ಧ ಮಕ್ಕಳನ್ನು ಈ ಯುದ್ಧಗಳು ಬಲಿ ತೆಗೆದುಕೊಳ್ಳುತ್ತಿದೆ. ಮಾನವ ಜನಾಂಗವೇ ಬಿಕ್ಕಟ್ಟನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ಮಹತ್ವವನ್ನು ಅರಿತು ಹೋರಾಟವನ್ನು ಬೆಳೆಸುವುದು ನಮ್ಮೆಲ್ಲರ ಮುಂದಿರುವ ಜವಾಬ್ದಾರಿ. ಜನತೆಯ ಸಮಸ್ಯೆಗಳ ವಿರುದ್ಧ ಹೋರಾಟಗಳು ಭುಗಿಲೆದ್ದರೂ ಅಂತಿಮವಾಗಿ ವ್ಯವಸ್ಥೆಯ ಬದಲಾವಣೆಗೆ ದಾರಿ ಮಾಡಿಕೊಡುವುದಿಲ್ಲ.
ಆಕ್ರೋಶದಿಂದ ಭುಗಿಲೇಳುವ ಹೋರಾಟಗಳು ತಾರ್ಕಿಕ ಅಂತ್ಯ ಕಾಣುವುದಿಲ್ಲ. ಈ ವಿಷಯವನ್ನು ನಮ್ಮ ನೆಚ್ಚಿನ ನಾಯಕರಾದ ಕಾಮ್ರೆಡ್ ಶಿವದಾಸ್ ಘೋಷ್ ರವರು 80 ವರ್ಷಗಳ ಹಿಂದೆಯೇ ತಿಳಿಸಿದ್ದಾರೆ. ಈ ಶೋಷಣೆಯ ಸಮಾಜ ಕೊನೆಗೊಳ್ಳಬೇಕೆಂದರೆ ಪ್ರಜ್ಞಾವಂತ ಹೋರಾಟ ಅನಿವಾರ್ಯ. ಅಂತಹ ಪ್ರಜ್ಞಾವಂತಿಕೆಯ ಹೋರಾಟವನ್ನು ಎಸ್ ಯು ಸಿ ಐ ಕಮ್ಯುನಿಸ್ ಪಕ್ಷವು ದೇಶದಾದ್ಯಂತ ಬೆಳೆಸುತ್ತಿದೆ.
ಈ ದಿಕ್ಕಿನಲ್ಲಿ ಪಕ್ಷದ ಕಾರ್ಯಕರ್ತರು ಬೆಂಬಲಿಗರು ತಮ್ಮನ್ನೇ ತಾವು ಬದಲಾಯಿಸಿಕೊಂಡು, ಪ್ರಜ್ಞಾವಂತಿಕೆಯ ಹೋರಾಟದಲ್ಲಿ ದೇಶದಾದ್ಯಂತ ಕ್ರಾಂತಿಕಾರಿ ವಿಚಾರಗಳನ್ನು ಹರಡುವ ಜವಾಬ್ದಾರಿಯನ್ನು ನಾವೆಲ್ಲರೂ ಕೈಗೆತ್ತಿಕೊಳ್ಳುವುದು ಈ ಘಳಿಗೆಯ ಅವಶ್ಯಕತೆ. ಸಮಾಜವಾದಿ ಕ್ರಾಂತಿ ನೆರವೇರಬೇಕೆಂದರೆ ಈ ದಾರಿ ಬಿಟ್ಟು ಬೇರೆ ದಾರಿ ಇಲ್ಲ, ಹಾಗಾಗಿ ಪಕ್ಷವನ್ನು ಬಲಿಷ್ಠ ಗೊಳಿಸುವಲ್ಲಿ ನಾವು ಇಂದು ಸಂಕಲ್ಪ ತೊಡಬೇಕೆಂದರು.
ಜಿಲ್ಲಾ ಕಾರ್ಯದರ್ಶಿ ಕಾ. ಲಕ್ಷ್ಮಣ ಜಡಗನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾ. ಗಂಗಾಧರ ಬಡಿಗೇರ ವೇದಿಕೆಯಲ್ಲಿದ್ದರು. ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಭುವನಾ ಬಳ್ಳಾರಿ, ದೀಪಾ ಧಾರವಾಡ, ಶರಣು ಗೋನವಾರ, ಭವಾನಿಶಂಕರ್ ಎಸ್ ಗೌಡ ಸೇರಿದಂತೆ ಪಕ್ಷದ ಸದಸ್ಯರು, ಕಾರ್ಯಕರ್ತರು, ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 