ಆ.15 ರಂದು ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಆ.15 ರಂದು ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ 79th Independence Day celebration program at the district headquarters on August 15th

ಅಚ್ಚುಕಟ್ಟಾಗಿ ಆಯೋಜಿಸಲು ಸಕಲ-ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ 

ಬಳ್ಳಾರಿ 23: ಬರುವ ಆಗಸ್ಟ್‌ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ರೀತಿಯ ಸಕಲ-ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. 

ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರಿ​‍್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣೇ ಬೈರೇಗೌಡ ಅವರು ಧ್ವಜಾರೋಹಣ ನೆರವೇರಿಸಿ, ಧ್ವಜಾರೋಹಣದ ಸಂದೇಶ ನೀಡುವರು. ಹಾಗಾಗಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿಯ ಮಾಹಿತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕಾರ್ಯದ ಪೂರ್ಣ ಮಾಹಿತಿ ಲಭ್ಯತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾ ಕೇಂದ್ರದಲ್ಲಿ ಆ.15 ರಂದು ಬೆಳಿಗ್ಗೆ 08 ಕ್ಕೆ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಪುಷ್ಪಾರ್ಚನೆ, 8.15 ಕ್ಕೆ ಹೆಚ್‌.ಆರ್‌.ಗವಿಯಪ್ಪ ವೃತ್ತದ ಬಳಿ ಬೃಹತ್ ಸ್ಥಂಬದಲ್ಲಿ ಧ್ವಜಾರೋಹಣಾ, 8.30 ಕ್ಕೆ ಬಿಎಂಸಿಆರ್‌ಸಿ ಬಳಿಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ, 8.45 ಕ್ಕೆ ಬಿಎಂಸಿಆರ್‌ಸಿ ಮೈದಾನದಲ್ಲಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ, ತುಕಡಿಗಳಿಂದ ಪರೇಡ್ ವೀಕ್ಷಣೆಯ ಬಳಿಕ 09 ಗಂಟೆಗೆ ಧ್ವಜಾರೋಹಣಾ ನೆರವೇರಿಸಿ ಸಂದೇಶ ನೀಡುವರು ಎಂದು ತಿಳಿಸಿದರು. 

ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿದ್ದು, ಎಲ್ಲರ ಸಹಮತ, ಸಹಭಾಗಿತ್ವ ಮತ್ತು ಸಮನ್ವಯತೆಯೊಂದಿಗೆ ಯಾವುದೇ ಲೋಪದೋಷವಾಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಮೈಕ್, ಶಾಮಿಯಾನ, ಆಸನಗಳು, ಉಪಹಾರ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಪೂರ್ಣವಾಗಿ ಸಿದ್ಧತೆಯಲ್ಲಿಟ್ಟುಕೊಳ್ಳಬೇಕು. ಮುಖ್ಯವಾಗಿ ಹವಮಾನ ಕುರಿತು ಅಗತ್ಯ ಮುಂಜಾಗ್ರತೆ ವಹಿಸಬೇಕು. ಯಾವುದೇ ಕೊರತೆಯಾಗದಂತೆ ಸುವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಪರೇಡ್ ಆಯೋಜನೆಗೆ ಸಂಬಂಧಿಸಿದಂತೆ ಅಗತ್ಯ ತಕ್ಕಂತೆ ಶಾಲಾ ತಂಡಗಳನ್ನು ಆಯ್ದುಕೊಂಡು ಪೂರ್ವ ತಯಾರಿ ನಡೆಸಬೇಕು. ಈ ಸಂದರ್ಭದಲ್ಲಿ ಲಘು ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಗುವುದು. ಸಮಿತಿ ರಚಿಸಿ ಅರ್ಹರನ್ನು ಆಯ್ಕೆ ಮಾಡಬೇಕು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಕಾರ್ಯಕ್ರಮ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಅಡಚಣೆ ಉಂಟಾದಲ್ಲಿ ಪರ್ಯಾಯ ವ್ಯವಸ್ಥೆ ಸಿದ್ಧತೆಯಲ್ಲಿಟ್ಟುಕೊಂಡಿರಬೇಕು ಎಂದರು.ಸಚಿವರ ಸಂದೇಶದ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಪೂರಕವಾದ ಗೀತೆಗಳ ನೃತ್ಯ ಆಯೋಜಿಸಬೇಕು ಮತ್ತು ಅದೇ ದಿನದಂದು ಸಂಜೆ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.*ಕಡ್ಡಾಯವಾಗಿ ಪಾಲ್ಗೊಳ್ಳಿ:* 

ರಾಷ್ಟ್ರೀಯ ಹಬ್ಬಗಳಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಕುರಿತು ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳಿಗೆ ಆದೇಶ ಹೊರಡಿಸಲಾಗುವುದು ಎಂದರಲ್ಲದೇ, ಅಧಿಕಾರಿಗಳು ತಮ್ಮ-ತಮ್ಮ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಅದೇರೀತಿಯಾಗಿ ನಗರದ ಮುಖ್ಯ ವೃತ್ತಗಳನ್ನು ಸಹ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್‌.ಎನ್‌., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಸಹಾಯಕ ಆಯುಕ್ತ ಪ್ರಮೋದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

ಜು.25 ರಂದು ನೇರ ಸಂದರ್ಶನಬಳ್ಳಾರಿ 23: ಬೆಂಗಳೂರಿನ ವೇರ್ ಹೌಸ್ ಆಸೋಸಿಯೇಟ್‌ನ ಎಸ್‌ಕೆ ಸೇಪ್ಟಿ ವಿಂಗ್ಸ್‌ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜು.25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಹರು ಭಾಗವಹಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.*ವಿದ್ಯಾರ್ಹತೆ:*ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್‌ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಂಪ್ಲಿ ಜೆಸ್ಕಾಂ: ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯಬಳ್ಳಾರಿ 23: ಕಂಪ್ಲಿ ಜೆಸ್ಕಾಂ ಉಪ ವಿಭಾಗದ ಆರ್‌ಏಪಿಡಿಆರ್‌ಪಿಸಾಫ್ಟವೇರ್‌ನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಕಂಪ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಜು.25 ರ 08.30 ರಿಂದ ಜು.27 ರಾತ್ರಿ 10 ಗಂಟೆಯವರೆಗೆ 2 ದಿನಗಳ ಕಾಲ ಕಂಪ್ಲಿ ಜೆಸ್ಕಾಂನ ಆನ್‌ಲೈನ್‌ನಲ್ಲಿ ನೆಟ್‌ವರ್ಕ್‌ ಲಭ್ಯವಿರದ ಕಾರಣ ಬಿಲ್ ಪಾವತಿ ಹಾಗೂ ಇತರೆ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಂಪ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನಬಳ್ಳಾರಿ 23: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅ.01 ರಂದು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್‌.ಗೋವಿಂದಪ್ಪ ಅವರು ತಿಳಿಸಿದ್ದಾರೆ. 

ರಾಜ್ಯ ಮಟ್ಟದಲ್ಲಿ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಂದ ನಿಗದಿತ 1 ಮತ್ತು 2ರ ನಮೂನೆಯ ಅರ್ಜಿಯ ಎಲ್ಲಾ ಕಲಂಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್‌ 25 ರೊಳಗಾಗಿ ದ್ವಿಪ್ರತಿಯಲ್ಲಿ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸಬೇಕು. 

ಮಾಹಿತಿಗಾಗಿ ವೆಬ್‌ಸೈಟ್‌ತಿತಿತಿ.ಜತಿಛಿ.ಞಚಿಡಿಟಿಚಿಣಚಿಞಚಿ.ರಠ.ಟಿಗೆ ಭೇಟಿ ನೀಡಿ ಪರೀಶೀಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ 

ಬಳ್ಳಾರಿ 23: ಬಳ್ಳಾರಿ (ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 15 ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ ಆಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.ಆಯ್ಕೆಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. 

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಆ.08 ಕೊನೆಯ ದಿನ. ಆಕ್ಷೇಪಣೆಗಳನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು. 

ಹೆಚ್ಚಿನ ಮಾಹಿತಿಗಾಗಿ ದೂ.08392-268609 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸಿರುಗುಪ್ಪ: ಹುದ್ದೆಗಳ ನೇಮಕಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ 23: ಸಿರುಗುಪ್ಪದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ರಾಜ್ಯ ಯೋಜನಾ ಕಚೇರಿ ವತಿಯಿಂದ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿ 2025-26ನೇ ಸಾಲಿಗೆ ಸಿರುಗುಪ್ಪದ ಎಸ್‌ಆರ್‌ಪಿ ಕೇಂದ್ರದಲ್ಲಿ ಖಾಲಿ ಇರುವ ಫಿಜಿಯೋಥೆರಪಿಸ್ಟ್‌ ಮತ್ತು ಸಹಾಯಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 

ವಿದ್ಯಾರ್ಹತೆ: ಫಿಜಿಯೋಥೆರಪಿಸ್ಟ್‌ ಹುದ್ದೆಗೆ ಬಿಪಿಟಿ/ಡಿಪಿಟಿ ಮತ್ತು ಸಹಾಯಕರ ಹುದ್ದೆಗೆ 7ನೇ ತರಗತಿ ಉತ್ತೀರ್ಣರಾಗಿರಬೇಕು. 

ಅರ್ಜಿಯನ್ನು ಜು.26 ರೊಳಗಾಗಿ ಸಿರುಗುಪ್ಪ ಕ್ಷೇತ್ರ ಸಂಪನ್ಮೂಲ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಸಿರುಗುಪ್ಪ ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಕ್ಷೇಪಣೆಗಳಿಗೆ ಆಹ್ವಾನಬಳ್ಳಾರಿ 23: ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ 01 ಅಂಗನವಾಡಿ ಕಾರ್ಯಕರ್ತೆ ಮತ್ತು 05 ಅಂಗನವಾಡಿ ಸಹಾಯಕಿಯರ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.ಆಗಸ್ಟ್‌ 08 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ. ಆಕ್ಷೇಪಣೆಗಳನ್ನು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.