ಸವದತ್ತಿ ವರ್ಗಾವಣೆಗೊಂಡ 8 ಪೊಲೀಸ್ ಸಿಬ್ಬಂದಿಗೆ ಸನ್ಮಾನ
8 police personnel who were transferred to Savadatti were felicitated
ಲೋಕದರ್ಶನ ವರದಿ
ಸವದತ್ತಿ 15: ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಬೇರೆಡೆಗೆ ವರ್ಗಾವಣೆಗೊಂಡಿರುವ 8 ಜನ ಪೊಲೀಸ್ ಸಿಬ್ಬಂದಿಗಳನ್ನು ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ ಬೆಂಡೆಗುಂಬಳ ಅವರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.ಇತ್ತೀಚೆಗೆ ವರ್ಗಾವಣೆಗೊಂಡ ಸಿಬ್ಬಂದಿಗಳಾದ ಬಿ.ಎಸ್. ಸಣಮಾಳಗಿ, ಯಲ್ಲಪ್ಪ ಅಜ್ಜನವರ, ಸುಭಾಸ ಬೆಟಗೇರಿ, ವೆಂಕಟೇಶ ಮೇಟಿ, ಪ್ರಕಾಶ ಗೋವನಕೊಪ್ಪ, ಸವಿತಾ ಹೊಸೂರ, ಕುಮಾರ ಮಾಲದನ್ನಿ ಹಾಗೂ ಯಲ್ಲಪ್ಪ ಗೋರವನಕೊಳ್ಳ ಅವರಿಗೆ ಠಾಣೆಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಬಳಿಕ ಮಾತನಾಡಿದ ಅವರು ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಎಂಬುದು ಸಹಜ ಪ್ರಕ್ರಿಯೆ. ಸವದತ್ತಿ ಠಾಣೆಯಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಈ ಎಂಟೂ ಸಿಬ್ಬಂದಿಗಳು ಅತ್ಯಂತ ನಿಷ್ಠೆ ಮತ್ತು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದ್ದಾರೆ. ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇವರ ಸೇವೆ ಶ್ಲಾಘನೀಯ. ಮುಂದಿನ ನಿಯೋಜಿತ ಸ್ಥಳಗಳಲ್ಲೂ ಇವರು ಇದೇ ರೀತಿಯ ಕರ್ತವ್ಯ ಪ್ರಜ್ಞೆ ಮೆರೆದು ಇಲಾಖೆಗೆ ಒಳ್ಳೆಯ ಹೆಸರು ತರಲಿ, ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಿಎಸ್‌ಐ ಕೆ.ಎಮ್.ಬನ್ನೂರ, ಅಪರಾಧ ವಿಭಾಗ ಪಿಎಸ್‌ಐ ಲಕ್ಷ್ಮಣ ಗೌಡಿ, ಠಾಣೆಯ ಇತರೆ ಪೊಲೀಸರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 