ಸರ್ವಜ್ಞ ವಿದ್ಯಾಪೀಠದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
80th Independence Day Celebration at Sarvajna Vidyapeetha
ತಾಳಿಕೋಟಿ 16 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಬಿ. ಮಂಗಳೂರು ಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಗುರು ಸಂತೋಷ ಪವಾರ, ಮುಖ್ಯ ಅತಿಥಿಗಳಾಗಿ ಸುಜಾತಾ ಮಂಗಳೂರು ಹಾಗೂ ಸವಿತಾ ಅಸ್ಕಿ, ದೈಹಿಕ ಶಿಕ್ಷಣ ಶಿಕ್ಷಕರಾದ ಬಸವರಾಜ ಚಳಗಿ ಮತ್ತು ಶಾಂತಗೌಡ ಬಿರಾದಾರ ಉಪಸ್ಥಿತರಿದ್ದರು. ರಾಜು ಜವಳಗೇರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 