ಕಾಗಿನೆಲೆ ಗ್ರಾಮದಲ್ಲಿ ಸಂಭ್ರಮದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ
80th Independence Day celebrated with enthusiasm in Kaginele village
ಬ್ಯಾಡಗಿ 16: : ತಾಲೂಕಿನ ಕಾಗಿನೆಲೆ ಗ್ರಾಮದ ಗ್ರಾಮ ಪಂಚಾಯತ ಆವರಣದಲ್ಲಿ ಶನಿವಾರ 80 ನೇ ಸ್ವಾತಂತ್ರ್ಯೊ?ತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಗ್ರಾಮದಲ್ಲಿ ಎಲ್ಲಿ ನೋಡಿದರೂ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟಗಳು ಮುಗಿಲೆತ್ತರಕ್ಕೆ ಹಾರಾಡುತ್ತಿದ್ದವು.ದಾರಿಯುದ್ದಕ್ಕೂ ಶಾಲಾ ಮಕ್ಕಳು ಸಾಲುಸಾಲಾಗಿ ತ್ರಿವರ್ಣ ಧ್ವಜವನ್ನು ಹಿಡಿದು ಭಾರತಾಂಬೆಗೆ ಜೈಕಾರ ಹಾಕಿ ಸಾಗಿದರು.ವಾಹನ ಚಾಲಕರು ಕೂಡ ಭಾರತದ ಬಾವುಟವನ್ನು ವಾಹನಗಳಿಗೆ ಕಟ್ಟಿ ಸಂಭ್ರಮದಿಂದ ದೇಶಪ್ರೆ?ಮವನ್ನು ವ್ಯಕ್ತಪಡಿಸಿದರು. ಶಾಲಾ-ಕಾಲೇಜುಗಲ್ಲಿ ಶಿಸ್ತಿನ ಸಿಪಾಯಿಗಳಂತೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು. ನಂತರ ದೇಶಭಕ್ತಿ ಗೀತೆಗಳು ಹಾಗೂ ರಾಷ್ಟ್ರಗೀತೆಯನ್ನು ಹಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 