ತಾಳಿಕೋಟಿಯಲ್ಲಿ ವಿಜೃಂಭಣೆಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
80th Independence Day celebrated with great enthusiasm in Talikoti
ತಾಳಿಕೋಟಿ 16 : ಪಟ್ಟಣದ ಸರ್ಕಾರಿ ಕನ್ನಡ ಶಾಲಾ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ತಹಸೀಲ್ದಾರ್ ಮಲ್ಲಿಕಾರ್ಜುನ ಅರಕೇರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮತ್ತು ಬಲಿದಾನ ಮಾಡಿದ ಮಹನೀಯರನ್ನು ಸದಾ ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. ಸ್ವಾತಂತ್ರ್ಯದ 80 ವರ್ಷಗಳಲ್ಲಿ ಭಾರತವು ಎಲ್ಲ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು, ಅಭಿವೃದ್ಧಿಯ ಪಯಣವನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರು, ಕೃಷಿ ಕ್ಷೇತ್ರದ ಸಾಧಕರು ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.
ಪಿಎಸ್ಐ ಜ್ಯೋತಿ ಖೋತ್ ಹಾಗೂ ಎಸ್.ಎಂ. ಪಡಶೆಟ್ಟಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಥಸಂಚಲನ ನಡೆಸಿ ಧ್ವಜವಂದನೆ ಸಲ್ಲಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜುಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ವೇಳೆ ತಹಸೀಲ್ದಾರ್ ಕಚೇರಿ, ಪುರಸಭೆ, ತಾಪಂ ಕಚೇರಿ ಹಾಗೂ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಸಹ ಪ್ರತ್ಯೇಕವಾಗಿ ಧ್ವಜಾರೋಹಣ ಕಾರ್ಯಕ್ರಮಗಳು ನಡೆಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 