ದೇಶಪ್ರೇಮದ ಸಂಭ್ರಮದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
80th Independence Day celebrated with patriotic fervor
ಲೋಕದರ್ಶನ ವರದಿ
ವಿಜಯಪುರ 18: ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಹಲವಾರು ದೇಶಭಕ್ತರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ರಾಷ್ಟ್ರಭಕ್ತಿಯ ಭಾವನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲೆಗಳು ಹಾಗೂ ಪೋಷಕರು ನಿರಂತರವಾಗಿ ಪ್ರಯತ್ನಿಸಬೇಕು ಎಂದು ರಾಮನಗೌಡ ಬಿ. ಪಾಟೀಲ ಅವರು ಕರೆ ನೀಡಿದರು.
ಅಟಲ್ ಬಿಹಾರಿ ವಾಜಪೇಯಿ ಶಾಲೆ, ಆಚರಿಸಲಾದ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅವರು ಧರ್ಮಪತ್ನಿ ಅಬೋಲಿ ರಾ. ಪಾಟೀಲ ಹಾಗೂ ಇತರ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ನಾಳಿನ ಪ್ರಜೆಗಳು. ಅವರು ಭವಿಷ್ಯದ ಭಾರತದ ರೂವಾರಿಗಳು ಹಾಗೂ ದೇಶವನ್ನು ಮುನ್ನಡೆಸುವ ಸಾಧಕರು. ಆದ್ದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ದೇಶದ ಬಗ್ಗೆ ಕಾಳಜಿ, ಜವಾಬ್ದಾರಿ ಮತ್ತು ರಾಷ್ಟ್ರೇ್ರಮವನ್ನು ಬೆಳೆಸಬೇಕು. ಕಾಲಕ್ಕೆ ತಕ್ಕಂತೆ ಕಲಿಕಾ ಪದ್ಧತಿಯಲ್ಲಿಯೂ ಬದಲಾವಣೆ ಅಗತ್ಯವಿದೆ. ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನವು ಅತ್ಯಂತ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ವಿದ್ಯಾರ್ಥಿಗಳು ಲಭ್ಯವಿರುವ ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು ತಮ್ಮ ಆಸಕ್ತಿ ಹಾಗೂ ಅಭಿರುಚಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಜ್ಞಾನ, ಕೌಶಲ್ಯ ಮತ್ತು ಸಾಧನೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ರಾಷ್ಟ್ರಗೀತೆ ಮೊಳಗುತ್ತಿದ್ದಂತೆ ಶಾಲಾ ಆವರಣದಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಾಣವಾಯಿತು.
ಧ್ವಜಾರೋಹಣದ ಬಳಿಕ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಂದ ಬ್ಯಾಂಡ್ ಮೇಳದೊಂದಿಗೆ ಅತ್ಯಂತ ವಿಜೃಂಭಣೆಯಿಂದ ಪರೇಡ್ ನಡೆಯಿತು. ವಿದ್ಯಾರ್ಥಿಗಳು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಶಿಸ್ತುಬದ್ಧವಾಗಿ ಪರೇಡ್ ನಡೆಸಿ, ಗಣ್ಯ ಅತಿಥಿಗಳ ಹಸ್ತದಿಂದ ಧ್ವಜಗಳನ್ನು ಸ್ವೀಕರಿಸುವ ಮೂಲಕ ನೋಡುಗರ ಕಣ್ಮನ ಸೆಳೆದರು. ವಿಶೇಷವಾಗಿ ಪೂರ್ವ ಪ್ರಾಥಮಿಕ ಹಂತದ ಪುಟಾಣಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪರೇಡ್ನಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಅವರ ಮುಗ್ಧ ನಡಿಗೆ ಹಾಗೂ ಉತ್ಸಾಹವು ನೆರೆದಿದ್ದವರ ಮುಖದಲ್ಲಿ ಮಂದಹಾಸ ಮೂಡಿಸಿತು.
ವಿಜಯಪುರ ಎ.ಬಿ.ವಿ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಸೂಗುರ, ಸದಸ್ಯರಾದ ನಾಗಪ್ಪ ಗುಗ್ಗರಿ, ಬಸವರಾಜ ಬೆಲ್ಲದ, ಜಿ.ಎಸ್. ಬಿರಾದರ್, ಸಿದ್ದೇಶ್ವರ ಸಂಸ್ಥೆ ಹಣಕಾಸು ಕಾರ್ಯದರ್ಶಿ ಸದಾನಂದ ಹೆಚ್ ದೇಸಾಯಿ, ಡಾ. ಎಚ್. ವೆಂಕಟೇಶ್, ಪ್ರಾಂಶುಪಾಲ ಐಶ್ವರ್ಯ ಸಂಗಮ, ಉಪ ಪ್ರಾಂಶುಪಾಲ ರವಿಕಾಂತ ಮೆಂಡೆಗಾರ, ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲ ಐಶ್ವರ್ಯ ಸಂಗಮ ಅವರು ವಿವಿಧ ಘಟಕಗಳ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 