ಜನಗಣತಿ ಕಾರ್ಯಕ್ರಮದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಜನಗಣತಿ ಕಾರ್ಯಕ್ರಮದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ 80th Independence Day celebration organized by the Census program

ಬಳ್ಳಾರಿ 16 : ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎನ್‌. ಗಂಗಿ ರೆಡ್ಡಿ ಅವರು, “ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವಾರು ಮಹನೀಯರು ಹೋರಾಟ ನಡೆಸಿ ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಅವರ ತ್ಯಾಗದ ಫಲವಾಗಿ ನಾವು ಇಂದು 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ದೇಶಕ್ಕೆ ಮತ್ತು ಸಮಾಜಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು” ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮೊತ್ಕರ್ ಶ್ರೀನಿವಾಸ್, ಗುಡಿಗಂಟೆ ಹನುಮಂತಪ್ಪ, ರಾಮಾಂಜನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.