ಜುಗೂಳ ವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಂಘಕ್ಕೆ 88.99 ಲಕ್ಷ ರೂ. ನಿವ್ಹಳ ಲಾಭ..!
88.99 lakh rupees profit for Jugoola Vidhodeshala Primary Rural Agriculture Association..!
ಕಾಗವಾಡ 17: ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳು ರೈತರಿಗೆ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದೆಯೆಂದು ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಹಾಗೂ ಸಂಘದ ಅಧ್ಯಕ್ಷ ಅಣ್ಣಾಸಾಬ ಪಾಟೀಲ ಹೇಳಿದರು.
ಅವರು, ಬುಧವಾರ ದಿ. 17 ರಂದು ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 106 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಸನ್ 2024-25 ನೇ ಸಾಲಿನಲ್ಲಿ ಸಂಘಕ್ಕೆ 88.99 ಲಕ್ಷ ರೂ. ನಿವ್ವಳ ಲಾಭವಾಗಿದ್ದು, ಸದಸ್ಯರಿಗೆ ಶೇ. 16 ರಷ್ಟು ಲಾಭಾಂಶ ವಿತರಿಸಲಾಗುವುದು. ಸಂಘದಲ್ಲಿ 51.69 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ್ದು, 31.17 ಕೋಟಿ ರೂ. ಸಾಲ ವಿತರಿಸಲಾಗಿದ್ದು, 30.97 ಕೋಟಿ ರೂ. ಠೇವು ಸಂಗ್ರಹಿಸಿ, 2 ಕೋಟಿ ರೂ. ಶೇರ ಬಂಡವಾಳ ಹೊಂದಿದೆ. ಸ್ವಂತ ನಿಧಿಗಳು 5.13 ಕೋಟಿ ಹೊಂದಿದೆ ಎಂದ ಅವರು, ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸ್ತ್ರೀ ಶಕ್ತಿ ಸಂಘಗಳಿಗೆ 60.35 ಲಕ್ಷ ರೂ. ಸಾಲ ವಿತರಿಸಲಾಗಿದ್ದು, ರೈತರಿಗೆ ಗೊಬ್ಬರ ಸಾಲ 21 ಲಕ್ಷ ನೀಡಲಾಗುತ್ತಿದ್ದು, ಬೆಳೆಸಾಲ ವಸೂಲಾತಿ ಶೇ. 97ಅ ರಷ್ಟು ಹಾಗೂ ಬಿಡಿಪಿ ಸಾಲ ವಸೂಲಾತಿ ಶೇ. 91 ಅ ರಷ್ಟಿದ್ದು, ಅಡಿಟ್ ವರ್ಗ ಅ ಆಗಿದೆ ಎಂದರು.ಕಾರ್ಯಕ್ರಮದ ವಿದ್ಯಸಾನಿಧ್ಯವನ್ನು ಪರಮಾನಂದವಾಡಿಯ ಡಾ. ಅಭಿನಮವ ಬ್ರಹ್ಮಾನಂದ ಮಹಾಸ್ವಾಮಿಗಳು ವಹಿಸಿ, ಆಶೀರ್ವಚನ ನೀಡಿದರು.
ಈ ವೇಳೆ ಗ್ರಾಮದ ಸುಪುತ್ರ ರವೀಂದ್ರ ಪಾಟೀಲ ಅವರು, ಸಹಕಾರಿ ಸಂಘಗಳ ಉಪ ನಿಬಂಧಕರಾಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರನ್ನು ದಂಪತಿ ಸಹಿತ ಗ್ರಾಮದ ಪರವಾಗಿ ಸನ್ಮಾನಿಸಲಾಯಿತು. ಇದೇ ವೇಳೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಂ.ಸಿ. ಹೂಗಾರ ಮತ್ತು ತಾಲೂಕಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ದರೆಪ್ಪಾ ನಾಯಿಕ ಅವರನ್ನು ಮತ್ತು ಅಭಿಯಂತರ ರವಿ ಘಟಗೆ, ಕಿರಣ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸುಧಾಕರ ಗಣೇಶವಾಡಿ ವಹಿಸಿದ್ದರು. ಕಾರ್ಯ ನಿರ್ವಾಹಕ ರಾಜಕುಮಾರ ಹುನ್ನರಗೆ ವರದಿ ವಾಚನ ಮಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 