ಕಾರವಾರ, 18: ಜಿಲ್ಲಾ ಪಂಚಾಯ್ತಿಯ 2019-20 ನೇ ಸಾಲಿನ 95396.26 ಲಕ್ಷ ರೂ.ಗಳ ಮುಂಗಡ ಪತ್ರಕ್ಕೆ ಮಂಗಳವಾರ ನಡೆದ ಜಿಲ್ಲಾ ಪಂಚಾಯ್ತಿಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರೆಯಿತು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಸಾಮಾನ್ಯ ಸಭೆಯಲ್ಲಿ 2019-20ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ, ಕೇಂದ್ರ ಮತ್ತು ರಾಜ್ಯ ಸಕರ್ಾರದ ಮಾರ್ಗಸೂಚಿಯ ಪ್ರಕಾರ 2019-20ನೇ ಸಾಲಿನ ಕರಡು ಯೋಜನೆಯನ್ನುಸಕರ್ಾರದ ಅನುಮೋದನೆಗೆ ಸಲ್ಲಿಸಿದ್ದು ಈಗಾಗಲೇ ಸಕರ್ಾರದ ಈ ಬಗ್ಗೆ ಅಂತಿಮ ಒಪ್ಪಿಗೆ ನೀಡಿ ಉತ್ತರ ಕನ್ನಡ ಜಿಲ್ಲಾ ಪಂಚಾಯ್ತಿ ಲೆಕ್ಕ ಶೀಷರ್ಿಕೆಯಡಿ ರೂ.95396.26 ಲಕ್ಷಗಳನ್ನು ಒದಗಿಸಿದೆ ಎಂದು ತಿಳಿಸಿದರು.
ಒಟ್ಟು ಮುಂಗಡ ಪತ್ರ ಮೊತ್ತದಲ್ಲಿ ಜಿಲ್ಲಾ ಪಂಚಾಯ್ತಿ ಕಾರ್ಯಕ್ರಮಗಳಿಗೆ ರೂ.29774.48 ಲಕ್ಷ, ತಾಲೂಕು ಪಂಚಾಯ್ತಿ ಕಾರ್ಯಕ್ರಮಗಳಿಗೆ ರೂ.65555.78 ಲಕ್ಷ ಹಾಗೂ ಗ್ರಾಮ ಪಂಚಾಯ್ತಿ ಕಾರ್ಯಕ್ರಮಗಳಿಗೆ ರೂ.66 ಲಕ್ಷ ಅನುದಾನ ಒದಗಿಸಲಾಗಿದೆ ಆದರೆ 2019-20ನೇ ಸಾಲಿನಲ್ಲಿ ಯೋಜನೆ-ಯೋಜನೇತರ ಲೆಕ್ಕ ಶೀಷರ್ಿಕೆಯಡಿ ಪ್ರತ್ಯೇಕವಾಗಿ ಅನುದಾನ ಒದಗಿಸಿರುವುದಿಲ್ಲ ಎಂದು ಅವರು ಸಭೆಗೆ ತಿಳಿಸಿದರು.
ಅಲ್ಲದೆ ಜಿಲ್ಲಾ ಪಂಚಾಯ್ತಿ ಅಧೀನ ಅಧಿಕಾರಿಗಳ ಮತ್ತು ನೌಕರರ ವೇತನಾಂಶ ಹಾಗೂ ವಿವಿಧ ಇಲಾಖೆಗಳಿಗೆ ಒದಗಿಸಿರುವ ಅನುದಾನವನ್ನು ಓದಿ ಹೇಳಿದರು ಹಾಗೂ 2019-20ನೇ ಸಾಲಿನ ಮುಂಗಡ ಪತ್ರಕ್ಕೆ ಜಿಲ್ಲಾ ಪಂಚಯ್ತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರೆಯಿತು.
ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡುವ ಸಂಬಂಧಿಸಿದಂತೆ ಸದ್ಯದಲ್ಲೇ ಕಡತ ವಿಲೇವಾರಿ ವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಎಂ.ರೋಷನ್ ತಿಳಿಸಿದ್ದಾರೆ.
ಮಂಗಳವಾರ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ವಿವಿಧ ಸದಸ್ಯರು, ಕೆಲವು ಇಲಾಖೆಗಳಲ್ಲಿ ಚುನಾವಣೆ ಮತ್ತಿತರ ಸಂದರ್ಭ ಎದುರಾದ ಹಿನ್ನೆಲೆಯಲ್ಲಿ ಕಡತಗಳು ವಿಲೇವಾರಿಯಾಗದೇ ಬಾಕಿ ಉಳಿದಿವೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಅವರು, ಕಡತಗಳ ವಿಲೇವಾರಿ ಮಾಡುವ ಸಲುವಾಗಿಯೇ ಸದ್ಯದಲ್ಲಿ ವಿಶೇಷವಾಗಿ ಕಡತ ವಿಲೇವಾರಿ ವಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ನಿದರ್ಿಷ್ಟ ಕಾಲಮಿತಿಯಲ್ಲಿ ಎಲ್ಲ ಕಡತಗಳನ್ನು ತೀರ್ಣಗೊಳಿಸಲಾಗುವುದು ಎಂದರು.
ತಾಲೂಕು ಮಟ್ಟದಲ್ಲಿಯೂ ಕಡತ ವಿಲೇವಾರಿ ವಾರ ಹಮ್ಮಿಕೊಳ್ಳಲಾಗುವುದು. ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಧಿಕಾರಿ ಸಿಬ್ಬಂದಿಗಳ ಕೊರತೆ ಇರುವುದರಿಂದಲೂ ವಿಳಂಬಕ್ಕೆ ಕಾರಣವಾಗಿದೆ. ಡಾಟಾ ಎಂಟ್ರಿ ಆಪರೇಟರ್ಗಳ ಹೊರಗುತ್ತಿಗೆ ಸಿಬ್ಬಂದಿಯನ್ನು ಪಡೆದು ಬಾಕಿ ಕಡತಗಳನ್ನು ಶೀಘ್ರವೇ ವಿಲೇವಾರಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಯೋಜನೆಯ ತುಂಡುಗುತ್ತಿಗೆಗೆ ಇನ್ನು ಮುಂದೆ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೊಳವೆಬಾವಿ ಕೊರೆಯುವುದು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಟೆಂಡರ್ ಆಹ್ವಾನಿಸಿಯೇ ಪಾರದರ್ಶಕವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಈ ಸಂಬಂಧ ಈಗಾಗಲೇ ಗ್ರಾಮೀಣ ನೀರು ಸರಬರಾಜು ಇಲಾಖೆ ಆಯುಕ್ತರ ಅನುಮತಿಯನ್ನೂ ಪಡೆಯಲಾಗಿದ್ದು ಇನ್ನು ಮುಂದೆ ಜಿಲ್ಲೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸಭೆಯಲ್ಲಿ ಸ್ಪಷ್ಟಪಡಿಸಿದರು.
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾರಬೇಕೆಂದು ಆಗ್ರಹಿಸಿ ಈಗಾಗಲೇ ಜಿಲ್ಲೆಯಲ್ಲಿ ನಡೆದಿರುವ ಸಾಮಾಜಿಕ ಜಾಲತಾಣ ನಡೆದಿರುವ ಅಭಿಯಾನಕ್ಕೆ ಪೂರಕವಾಗಿ ಜಿಲ್ಲಾ ಪಂಚಾಯ್ತಿಯಿಂದಲೂ ನಿರ್ಣಯ ಕೈಗೊಂಡು ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಉಳಿದಂತೆ 2019-20ನೇ ಸಾಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಭೆಯಲ್ಲಿ ಒಪ್ಪಿಗೆ ಪಡೆಯಲಾಯಿತು.
ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ್ ರೇಣಕೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ್ ಮಹಾದೇವ ನಾಯ್ಕ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜಯ ಮಾರುತಿ ಹಣಬರ, ಸಾಮಾಜಿಕ ಸ್ಥಾಯಿ ಅಧ್ಯಕ್ಷೆ ಜಯಮ್ಮ ಕೃಷ್ಣ ಹಿರಳ್ಳಿ ಉಪಸ್ಥಿತರಿದ್ದರು.