ಸೊರಬದಲ್ಲಿ ಅ.ಭಾರತ ಶಿವಾಚಾರ್ಯ ಸಂಸ್ಥೆಯ ಸದ್ಬೋಧನಾ ಸಮಾರಂಭ
A. Bharat Shivacharya Sanstha's Sadbhodha ceremony in Sorab
ಲೋಕದರ್ಶನ ವರದಿ
ಶಿವಮೊಗ್ಗ 21: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಅಖಿಲ ಭಾರತ ಶಿವಾಚಾರ್ಯ ಸಂಸ್ಥೆ ಜಿಲ್ಲಾ ಘಟಕಗಳ ಶಿವಾಚಾರ್ಯರ ಸದ್ಬೋಧನಾ ಸಮಾರಂಭವನ್ನು ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಸಹಕಾರ್ಯದರ್ಶಿಗಳಾದ ಬಿಳಕಿ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು. ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಜರುಗಿದ ಶಿವಾಚಾರ್ಯ ಸಂಸ್ಥೆಯ ನಾಲ್ಕು ಜಿಲ್ಲಾ ಘಟಕಗಳ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಶಿವಮೊಗ್ಗ ಜಿಲ್ಲಾ ಘಟಕ ಅಧ್ಯಕ್ಷರಾದ ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸೊರಬದಲ್ಲಿ ನಡೆಯುವ ಸದ್ಬೋಧನಾ ಪಾದಯಾತ್ರೆಯ ಸಂದರ್ಭದಲ್ಲಿ ಭಸ್ಮ ರುದ್ರಾಕ್ಷಿ ಧಾರಣೆ ಮಾಡಲಾಗುವುದು. ಅಲ್ಲದೇ ಇಷ್ಟಲಿಂಗ ಪೂಜೆ ನಡೆಸುವ ಮೂಲಕ ಭಕ್ತಾದಿಗಳಿಗೆ ಪೂಜೆಯ ಮಹತ್ವವನ್ನು ತಿಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಗರದಲ್ಲಿ ಜರುಗಿದ ಶ್ರೀ ಜಗದ್ಗುರು ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಹಾಗೂ ಜನ ಜಾಗೃತಿ ಧರ್ಮ ಸಭೆಯ ಯಶಸ್ಸಿಗಾಗಿ ಶ್ರಮಿಸಿದ ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಡಾ.ನಾಗಭೂಷಣ ಶಿವಾಚಾರ್ಯರು, ತೊಗರ್ಸಿ ಚನ್ನವೀರ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು.
ಈ ಸಭೆಯಲ್ಲಿ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರಾದ ರಟ್ಟಿಹಳ್ಳಿ ಶ್ರೀಗಳು, ಚಿಕ್ಕಮಗಳೂರು ಜಿಲ್ಲಾ ಘಟಕದ ಕಾರ್ಯದರ್ಶಿಗಳಾದ ಶಂಕರದೇವರ ಮಠದ ಶ್ರೀಗಳು, ದಾವಣಗೆರೆ ಜಿಲ್ಲಾ ಕಾರ್ಯದರ್ಶಿಗಳಾದ ತಾವರೆಕೆರೆ ಶ್ರೀಗಳು. ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿಗಳಾದ ತೊಗರ್ಸಿ ಪಂಚವಣ್ಣಿಗೆಮಠದ ಶ್ರೀಗಳು, ಶಿವಮೊಗ್ಗ ಜಿಲ್ಲಾ ಸಹಕಾರ್ಯದರ್ಶಿಗಳಾದ ಕ್ಯಾಸನೂರು, ತೊಗರ್ಸಿ ಶ್ರೀಗಳು. ಕೊಣಂದೂರು ಶ್ರೀಗಳು, ಶಿವಮೊಗ್ಗ ಜಿಲ್ಲಾ ಖಜಾಂಚಿಗಳಾದ
ದಿಂಡದಹಳ್ಳಿ ಶ್ರೀಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಶಿವಮೊಗ್ಗ ಜಿಲ್ಲಾ ಸದಸ್ಯರುಗಳಾದ ಜಕ್ಕಲಿ-ಹಾರನಹಳ್ಳಿ ಶ್ರೀಗಳು, ಹಾರನಹಳ್ಳಿ ಶ್ರೀಗಳು, ಬಳಸಗೋಡು ಶ್ರೀಗಳು ಉಪಸ್ಥಿತರಿದ್ದರು. ಅಖಿಲ ಭಾರತ ಶಿವಾಚಾರ್ಯ ಸಂಸ್ಥೆಯ ಶಿವಮೊಗ್ಗ ಜಿಲ್ಲಾ ಘಟಕದ ವಕ್ತಾರರಾದ ದುಗ್ಲಿ-ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯರು ಪ್ರಾಸ್ತಾವಿಕ ಮಾತನಾಡಿ ಶಿವಾಚಾರ್ಯರು ಹೆಚ್ಚು ಹೆಚ್ಚು ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆ ಆಗಿದೆ ಎಂದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 