ಎ. ಎಸ್. ಪಾಟೀಲರಿಗೆ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯತ್ವ
A. S. Patil granted membership of Kittur Rani Chennamma University Syndicate
ವಿಜಯಪುರ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಎ. ಎಸ್. ಪಾಟೀಲ ಅವರು ನಾಮನಿರ್ದೇಶಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಕ್ಯಾಬ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 45 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಸರ್ಕಾರವು ಈ ಗೌರವ ನೀಡಿದೆ ಎಂದು ಹೇಳಿದರು. ಈ ಗೌರವವು ಸಿಕ್ಯಾಬ್ ಶಿಕ್ಷಣ ಸಂಸ್ಥೆಗೆ ಸೇರಿದೆ ಎಂದು ಅವರು ಅಭಿಪ್ರಾಯಪಟ್ಟರು.
ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರಕುವಂತೆ ಮಾಡುವುದೇ ತಮ್ಮ ಉದ್ದೇಶ ಎಂದು ಅವರು ತಿಳಿಸಿದರು. ತಂತ್ರಜ್ಞಾನ ಯುಗದಲ್ಲಿ ದೇಶವು ವಿವಿಧ ರಂಗಗಳಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಕಾಣುತ್ತಿದ್ದು, ತಂತ್ರಜ್ಞಾನದೊಂದಿಗೆ ಕೈಜೋಡಿಸಿ ಮುಂದುವರಿದಾಗ ಮಾತ್ರ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು.
ವಿಶ್ವವಿದ್ಯಾಲಯದ ಅಭಿವೃದ್ಧಿಗೆ ತಾವು ಸಕ್ರಿಯವಾಗಿ ಕೊಡುಗೆ ನೀಡುವುದಾಗಿ ಹಾಗೂ ಶೈಕ್ಷಣಿಕ ಕ್ಷೇತ್ರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜುಗಳ ಡೀನ್ ಎನ್. ಎಸ್. ಭೂಸನೂರ ಮಾತನಾಡಿ, ಸಿಕ್ಯಾಬ್ ಸಂಸ್ಥೆಯ ಬೆಳವಣಿಗೆಯಲ್ಲಿ ಡಾ. ಎಸ್. ಎ. ಪುಣೇಕರ ಅವರ ಪರಿಶ್ರಮ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಲಾವುದ್ದೀನ್ ಅಯ್ಯುಬಿ ಎಸ್. ಪುಣೇಕರ ಮಾತನಾಡಿ, ಎ. ಎಸ್. ಪಾಟೀಲರ ಸೇವೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘವಾಗಿದ್ದು, ಅವರು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಅವರ ಅವಧಿಯಲ್ಲಿ ವಿಶ್ವವಿದ್ಯಾಲಯವು ದೇಶದ ಮಾದರಿ ಸಂಸ್ಥೆಯಾಗಿ ಬೆಳೆಯಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎಂ. ಎಂ. ಗುರಡಿ, ಉಪನ್ಯಾಸಕರುಗಳಾದ ಯು. ಎನ್. ಕುಂಟೋಜಿ, ಎನ್. ಜೆ. ಪಠಾಣ, ಎಂ. ಎ. ಹೆಬಳಿಕರ್, ಎ. ಎನ್. ರಿಸಾಲದಾರ, ಡಾ. ಬಿ. ಎ. ಧಪೇದಾರ, ರಿಯಾಜ್ ಜೀರಗಾಳ, ಎ. ಜೆ. ನಮಾಜಿ, ಎ. ಸಿ. ಸುರ್ಕಿ, ಎಫ್. ಎಸ್. ಜಾಹಗಿದಾರ, ಎಂ. ಎ. ದೊಡಮನಿ, ಎಂ. ಆರ್. ತಪಶೆಟ್ಟಿ, ಬಿ. ಎಂ. ಭಂಡಾರಿ, ಆರ್. ಎಲ್. ಕಣ್ಣಿ, ಮಂಜುಳಾ ಘಟೆಗಾರ, ರತ್ನಾ ಕಾಂಬಳೆ, ವಿ. ಎಸ್. ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 