ಲಂಡಿಹಳ್ಳದಲ್ಲಿ ಬೆಳೆದ ಗಿಡ ಗಂಟೆಗಳನ್ನು ತೆಗೆಯುವಂತೆ ಸೂಚಿಸಿದ- ಎ ಸಿ ಗಂಗಪ್ಪ
A.C. Gangappa suggested removing the bells growing in Landihalla
ಲಕ್ಷ್ಮೇಶ್ವರ 09: ಪುರಸಭೆ ವ್ಯಾಪ್ತಿಯಲ್ಲಿ ಬರುವ ಹಳ್ಳದಕೇರಿ ಮತ್ತು ಕೆಂಚಲಾಪುರ ಓಣಿಯಲ್ಲಿ ಹರಿಯುವ ಲಂಡಿಹಳ್ಳ ಮತ್ತು ಜೋನಹಳ್ಳದಲ್ಲಿ ಗಿಡ ಗಂಟಿಗಳು ಬೆಳೆದು ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ಗಿಡ ಗಂಟಿಗಳ ಅಡೆತಡೆಯಿಂದ ಬಹಳಷ್ಟು ಸಂಗ್ರಹವಾಗಿ ಮನೆಗಳಿಗೆ ನೀರು ನುಗ್ಗಿ ತೊಂದರೆ ಆಗುತ್ತಿರುವದನ್ನು ಸರಿಪಡಿಸುವಂತೆ ಮೊನ್ನೆಯ ದಿನ ಓಣಿಯ ಸಾರ್ವಜನಿಕರು ಹಾಗೂ ರೈತರು ಅಧಿಕಾರಿಗಳಿಗೆ ಆಗ್ರಹಿಸಿದ್ದರು ಇದಕ್ಕೆ ಸ್ಪಂದಿಸಿರುವ ಗದಗ ಜಿಲ್ಲಾ ಉಪವಿಭಾಗಧಿಕಾರಿಗಳಾದ(ಎ. ಸಿ)ಶ್ರೀ ಎಮ್.ಗಂಗಪ್ಪ ಅವರು ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳಿಗೆ 2ದಿನಗಳ ಒಳಗೆ ಹಳ್ಳದಲ್ಲಿ ಬೆಳೆದಿರುವ ಗಿಡ ಗಂಟಿಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸುವಂತೆ ಸೂಚಿಸಿದರು ಒಂದು ವೇಳೆ 2 ದಿನದ ಒಳಗಾಗಿ ಸರಿಪಡಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಮತ್ತೆ 2 ದಿನದ ನಂತರ ಗಿಡ ಗಂಟಿ ತೆರವು ಕಾರ್ಯವನ್ನು ವೀಕ್ಷಣೆ ಮಾಡುತ್ತೇನೆ ಎಂದು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ತಿಳಿಸಿದರು. ಈ ಸಮಯದಲ್ಲಿ ಪುರಸಭೆಯ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ಲ ಸೇರಿದಂತೆ ಇನ್ನೂ ಅನೇಕ ರೈತ ಮುಖಂಡರು ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 