ತಪಸ್ಸಿನಂತೆ ವಿದ್ಯಾಭ್ಯಾಸಕ್ಕೆ ಕರೆ : ವಿ.ಎಲ್. ಪಾಂಡುರಂಗ
A Call to Education as Penance : V.L. Panduranga
ಲೋಕದರ್ಶನ ವರದಿ
ಸಿಂದಗಿ 4: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನವನ್ನು ತಪಸ್ಸಿನಂತೆ ನಡೆಸಿ, ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ಪಟ್ಟರೆ ಯಶಸ್ಸು ಖಚಿತ ಎಂದು ಬೆಂಗಳೂರಿನ ಕ್ರೋಮ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರೊ. ವಿ.ಎಲ್. ಪಾಂಡುರಂಗ ಹೇಳಿದರು.
ಮೊರಟಗಿ ಗ್ರಾಮದ ಸಿದ್ಧರಾಮೇಶ್ವರ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಕಲ್ಪವೃಕ್ಷ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಥಮ ಪಿಯುಸಿ ಹಾಗೂ ಪ್ರಥಮ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪೋಷಕರ ತ್ಯಾಗ ಮತ್ತು ಪರಿಶ್ರಮವನ್ನು ಅರಿತು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಉನ್ನತ ಗುರಿ ಇಟ್ಟುಕೊಂಡು ಪರಿಶ್ರಮಿಸಿದರೆ ಸಾಧನೆ ಸಾಧ್ಯ. ಅವಕಾಶಗಳನ್ನು ಸಮರ್ಕವಾಗಿ ಬಳಸಿಕೊಳ್ಳುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆಶೀರ್ವಚನ ನೀಡಿದ ಸದಾನಂದ ಶರಣರು, ಭಾರತವು ಶ್ರೇಷ್ಠ ಗುರುಪರಂಪರೆಯ ದೇಶವಾಗಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದೆ. ವಿದ್ಯೆಯ ಜೊತೆಗೆ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಸ್ಥಾಪಕ ಅಧ್ಯಕ್ಷ ಶಿವಶರಣಗೌಡ ಬಿರಾದಾರ, ಆಡಳಿತಾಧಿಕಾರಿ ಡಾ. ದತ್ತಾತ್ರೇಯ, ಎಸ್.ಎಚ್. ಧೂಳಬಾ, ಡಾ. ವಿರೂಪಾಕ್ಷಪ್ಪ ಬಿರಾದಾರ, ಪ್ರಾಚಾರ್ಯ ಎಂ.ಸಿ. ಸಿಂದಗಿ, ಭಾರತಿ ಚಿಕ್ಕಲಗಿ, ಡಾ. ಎ.ಬಿ. ಸಿಂದಗಿ, ಜಿಲಾನಿ ನಗಾವಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 