ಜಾನಪದ ಕಲೆಗಳ ಸಂಭ್ರಮ: ‘ಜಾನಪದ ಉತ್ಸವ’ ಯಶಸ್ವಿ
A Celebration of Folk Arts: ‘Folk Festival’ a Success
ಧಾರವಾಡ.19: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಮರೇವಾಡ ಗ್ರಾಮದ ಲಕ್ಷ್ಮೀದೇವಿ ಮಹಿಳಾ ಜಾನಪದ ಕಲಾ ಡೊಳ್ಳಿನ ಸಂಘದ ವತಿಯಿಂದ ಗ್ರಾಮೀಣ ಭಾಗದ ಜಾನಪದ ಕಲೆಗಳ ಸಂಭ್ರಮದ ‘ಜಾನಪದ ಉತ್ಸವ’ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 11.30ಕ್ಕೆ ಧಾರವಾಡದ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಮರೇವಾಡ ಗ್ರಾಮದ ಪರಮಪೂಜ್ಯ ಶೇಖರಯ್ಯ ಹಿರೇಮಠ ಸ್ವಾಮೀಜಿ ವಹಿಸಿದ್ದರು. ಕರ್ನಾಟಕ ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ತವನಪ್ಪ ಅಷ್ಟಗಿ ಅವರು ಡೊಳ್ಳು ವಾದನ ಹಾಗೂ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಆಧುನಿಕತೆ, ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದ ಗ್ರಾಮೀಣ ಭಾಗದ ಜಾನಪದ ಕಲೆಗಳು ನಿಧಾನವಾಗಿ ಮರೆಯಾಗುತ್ತಿವೆ. ಜಾನಪದ ಕಲೆಗಳ ಉಳಿವು ಮತ್ತು ಕಲಾವಿದರ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಅಧ್ಯಕ್ಷತೆಯನ್ನು ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಸತೀಶ್ ತುರಮರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ಕುಮಾರ ಬೆಕ್ಕೆರಿ ಮಾತನಾಡಿ, ಇಲಾಖೆಯಿಂದ ಕಲಾವಿದರಿಗಾಗಿ ಹಲವು ಯೋಜನೆಗಳಿದ್ದು, ಅವುಗಳನ್ನು ಸಮರ್ಕವಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.
ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಿಕಾರ್ಜುನ ಕೊಯ್ಯಪ್ಪನವರ, ಮಾಜಿ ಅಧ್ಯಕ್ಷ ಚನ್ನಬಸಪ್ಪ ಸಿ. ಮೊರಬದ, ಬಸವರಾಜ ಮಾದರ, ಪರಮೇಶ್ವರ ಬಿ. ಮಾದರ, ಸುನಿತಾ ಹಡಪದ, ಆನಂದ ದ್ಯಾ ಮಾದರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುದ್ದಪ್ಪ ಜಂಗಳಿ, ಬಸಪ್ಪ ಮಾದರ, ಪರಶುರಾಮ ಮಾದರ, ಮಲ್ಲಪ್ಪ ಲಕ್ಕಣ್ಣವರ, ಶಂಕರ್ಪ, ಮಹಾದೇವಪ್ಪ ಗರಗದ, ಶ್ರೀಕಾಂತ ಬಬ್ಲಿ, ದ್ಯಾಮಣ್ಣ ಲಮಾಣಿ, ಶಿವಾನಂದ ಅಮರಶೆಟ್ಟಿ, ಭೀಮಸಿ ಕಬ್ಬೂರಕರ, ಲಕ್ಷ್ಮಪ್ಪ ಕಂಬಳನವರ, ಧರ್ಮರಾಜ ಕಂಬಳೇನವರ, ಹನುಮಂತಪ್ಪ ಮಾದರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಸನ್ಮಾನಿಸಲಾಯಿತು.
ಸಂಘದ ಪದಾಧಿಕಾರಿಗಳಾದ ಮಹಾದೇವಿ ದುರ್ಗವ್ವ ಮಾದರ ಕಾರ್ಯಕ್ರಮ ನಿರೂಪಿಸಿದರು. ಬಸವ್ವ ಮಾದರ ಅತಿಥಿಗಳನ್ನು ಸ್ವಾಗತಿಸಿದರು. ಶೋಭಾ ಕಂಬಳನ್ನವರ ವಂದನಾರೆ್ಣ ಸಲ್ಲಿಸಿದರು. ಕಾರ್ಯಕ್ರಮದ ಬಳಿಕ ವಿವಿಧ ಕಲಾತಂಡಗಳಿಂದ ಡೊಳ್ಳು ಕುಣಿತ, ಕರಡಿ ವಾದ್ಯ, ಜಗ್ಗಲಿಗೆ, ಭಜನಾಪದ, ತತ್ವಪದ ಹಾಗೂ ಇತರೆ ಜಾನಪದ ಕಲಾ ಪ್ರದರ್ಶನಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 